Site icon Vistara News

Karnataka Weather : ಇಂದು ಕರಾವಳಿ, ಮಲೆನಾಡಿನಲ್ಲಿ ಭರ್ಜರಿ ಮಳೆ; ಬೆಂಗಳೂರಿನಲ್ಲಿ ರಾತ್ರಿ ವರ್ಷಧಾರೆ?

woman with umbrella on street

ಬೆಂಗಳೂರು: ರಾಜ್ಯದಲ್ಲಿ ಮಳೆಯಾಗುವ ಪ್ರಮಾಣ ಕ್ಷೀಣಿಸುತ್ತಾ ಬರುತ್ತಿದೆ. ಬಹುತೇಕ ಜಿಲ್ಲೆಗಳಲ್ಲಿ ಚಳಿ ವಾತಾವರಣ ಹೆಚ್ಚಿದೆ. ಇನ್ನು ಮಂಗಳವಾರದ (ಅ. 31) ವಾತಾವರಣವನ್ನೇ ತೆಗೆದುಕೊಂಡರೆ ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದ ಕಾರವಾರದಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದರೆ, ಬೀದರ್‌ನಲ್ಲಿ ಕನಿಷ್ಠ 16.2 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ದಾಖಲಾಗಿದೆ. ಬೀದರ್‌ನಲ್ಲಿ ಭಾರಿ ಚಳಿಯ ವಾತಾವರಣ ಕಂಡುಬಂದಿದೆ. ಮುಂದಿನ 48 ಗಂಟೆಗಳ ಲೆಕ್ಕಾಚಾರವನ್ನು ಗಮನಿಸುವುದಾದರೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಮಳೆ ಮುನ್ಸೂಚನೆ (Karnataka weather forecast) ಇದೆ. ಉತ್ತರ ಒಳನಾಡಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ (Rain News) ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯಾದ್ಯಂತ ಒಂದೆರಡು ಕಡಗಳಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಚಾಮರಾಜನಗರ, ತುಮಕೂರು, ರಾಮನಗರದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ಉಲ್ಲೇಖಿಸಿದೆ.

ಉತ್ತರ ಒಳನಾಡಿನ ಕೆಲವು ಕಡೆ ಮಳೆ

ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ, ಬಹುತೇಕ ಮೋಡ ಕವಿದ ವಾತಾವರಣ ಇರುತ್ತದೆ. ಹೀಗಾಗಿ ಈ ಎಲ್ಲ ಕಡೆ ಮಳೆ ಬಂದೇ ಬಿಡುತ್ತದೆ ಎಂಬ ನಿಖರತೆ ಇಲ್ಲ. ಉಳಿದಂತೆ ವಿಜಯನಗರ, ಬೆಳಗಾವಿ, ಬಾಗಲಕೋಟೆ ಮತ್ತು ರಾಯಚೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು – ಕರಾವಳಿಯಲ್ಲಿ ಮಳೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಇನ್ನಿತರ ಕಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಬಿಸಿಲು – ಮೋಡ

ಬೆಂಗಳೂರಿನ ಪರಿಸ್ಥಿತಿಯನ್ನು ಗಮನಿಸುವುದಾದರೆ ಬೆಳಗ್ಗೆ ಸಮಯದಲ್ಲಿ ಹೆಚ್ಚಿನ ಬಿಸಿಲಿನ ಇರುತ್ತದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅ.31ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮಾಣಿ, ತ್ಯಾಗರ್ತಿಯಲ್ಲಿ ತಲಾ 5 ಸೆಂ.ಮೀ, ಪಣಂಬೂರು, ಧರ್ಮಸ್ಥಳ, ಬೆಳ್ತಂಗಡಿ , ಸಕಲೇಶಪುರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಬೆಳಗಾವಿ ನಗರ 3, ಸುಳ್ಯ, ಪುತ್ತೂರು, ಮಂಗಳೂರು, ಹೊಸದುರ್ಗ, ಎನ್.ಆರ್.ಪುರ, ಶೃಂಗೇರಿ, ಯಗಟಿ , ಭಾಗಮಂಡಲದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Operation Leopard : ಬೊಮ್ಮನಹಳ್ಳಿಯ ಚಿರತೆ ಕಾರ್ಯಾಚರಣೆಗೆ ಶಾರ್ಪ್‌ಶೂಟರ್ಸ್‌ ಎಂಟ್ರಿ

ಬನವಾಸಿ, ಕುಮಟಾ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಅಕ್ಕಿಆಲೂರು, ಕಟ್ರೋಲ್, ಬೈಲಹೊಂಗಲ, ಚಿಕ್ಕಮಗಳೂರು, ಕೊಟ್ಟಿಗೆಹಾರ ಕಡೂರು, ಜಯಪುರ, ತರೀಕೆರೆ, ಕೊಪ್ಪ, ಕಳಸ, ಅಜ್ಜಂಪುರ, ಮಾಗಡಿ, ಕೊಳ್ಳೇಗಾಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 34 ಡಿ.ಸೆ ಹಾಗೂ ಕನಿಷ್ಠ ಉಷ್ಣಾಂಶ ಬೀದರ್‌ನಲ್ಲಿ 16.2 ಡಿ.ಸೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version