Site icon Vistara News

Karnataka weather: ಸಂಜೆಗೆ ಶುರುವಾಗುತ್ತೆ ಮಳೆ; ಇನ್ನೊಂದು ವಾರ ಈ ಜಿಲ್ಲೆಯವರು ಎಚ್ಚರ!

Heavy rains lash Karnataka for another week

ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ದಾವಣಗೆರೆ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರದಲ್ಲಿ ಚದುರಿದಂತೆ (Karnataka weather Forecast) ಮಳೆಯಾಗಲಿದೆ.

ಉತ್ತರ ಒಳನಾಡಿನ ವಿಜಯನಗರ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಕೊಪ್ಪಳ, ಗದಗ, ಬಾಗಲಕೋಟೆ, ಗದಗ, ಹಾವೇರಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಶುಷ್ಕ ವಾತಾವರಣ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕರಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಒಣಹವೆ ಮುಂದುವರಿಯಲಿದೆ.

ಇದನ್ನೂ ಓದಿ: Murder Case : ಹೆಂಡ್ತಿಯನ್ನು ಕಡಿದು ಹಾಕಿ ಆತ್ಮಹತ್ಯೆಗೆ ಶರಣಾದ!

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಹಗುರದಿಂದ ಕೂಡಿದ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಗುರುವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರಒಳನಾಡಿನಲ್ಲಿ ಒಣಹವೆ ಮುಂದುವರಿದಿತ್ತು. ವಿಜಯಪುರದಲ್ಲಿ 12.5 ಡಿ.ಸೆ ಕಡಿಮೆ ಉಷ್ಣಾಂಶ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version