Site icon Vistara News

Karnataka Weather: ಇಂದು ಮೈಸೂರು, ಕೊಡಗು ಸೇರಿ ವಿವಿಧೆಡೆ ಮಳೆ; ಮುಂದಿನ 5 ದಿನ ತಾಪಮಾನದಲ್ಲಿ ಭಾರಿ ಏರಿಕೆ!

Karnataka Weather

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 25ರಂದು ಬೆಳಗಾವಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.‌

ಕಳೆದ ಒಂದು ವಾರದಿಂದ ರಾಜ್ಯದ ವಿವಿಧೆಡೆ ಅಬ್ಬರಿಸಿದ್ದ ವರುಣ ಇನ್ನೊಂದು ವಾರ ಕೊಂಚ ಬಿಡುವು ಪಡೆಯಲಿದ್ದಾನೆ. ಏ.26ರಿಂದ ಮೇ 1ರವರೆಗೆ ರಾಜ್ಯದಾದ್ಯಂತ ರಣ ಬಿಸಿಲಿನ ಹಿನ್ನೆಲೆ ಒಣಹವೆ ಇರುವ ಸಾಧ್ಯತೆ ಇದ್ದು, ಮುಂದಿನ 4 ದಿನ ಶಾಖದ ಅಲೆಯ ತೀವ್ರತೆ ಹೆಚ್ಚಾಗಲಿದೆ.

ಶಾಖದ ಅಲೆಯ ಎಚ್ಚರಿಕೆ

ಏ.24ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಶಾಖದ ಅಲೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಏ.25ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.27ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.28ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಪಮಾನದ ಮುನ್ಸೂಚನೆ

ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನು ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಅಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37° C ಮತ್ತು 23 °C ಇರುವ ಸಾಧ್ಯತೆ ಇದೆ.

Exit mobile version