Site icon Vistara News

Karnataka Weather: ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರಿ ಮಳೆ; ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ!

Karnataka Weather

ಬೆಂಗಳೂರು: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಜೂನ್‌ 26ರಂದು ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಪ್ರತ್ಯೇಕ ಕಡೆ ನಿರಂತರ ಗಾಳಿ (45-55 kmph) ಸಹಿತ ಭಾರಿ ಮಳೆ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather) ನೀಡಿದೆ.

ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,
ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಇರುವ ಸಾಧ್ಯತೆಯಿದೆ.

ಇನ್ನು ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸುರಿಯಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ಗಂಟೆಗೆ 35 ಕಿ.ಮೀನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ, ಅಲೆಗಳು ರಾತ್ರಿ 11.30ರವರೆಗೆ 3.3ರಿಂದ 3.6 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಮುನ್ಸೂಚನೆ ನೀಡಲಾಗಿದೆ. ಸಾಗರ ಕಾರ್ಯಾಚರಣೆ ಮತ್ತು ಹತ್ತಿರದ ದಡದ ಮನರಂಜನೆ ಮಾಡುವಾಗ ಜಾಗರೂಕರಾಗಿರಿ ಎಂದು ಸಲಹೆ ನೀಡಲಾಗಿದೆ.

ಉಡುಪಿಯಲ್ಲಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ, ರಾತ್ರಿ 11.30ರ ವರೆಗೆ 3.4ರಿಂದ 3.8 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣವು ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಉತ್ತರ ಕನ್ನಡ, ಕರ್ನಾಟಕ ಕರಾವಳಿಯಲ್ಲಿ ಮಾಜಾಳಿಯಿಂದ ಭಟ್ಕಳದವರೆಗೆ ರಾತ್ರಿ 11.30ರವರೆಗೆ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣ ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಇದನ್ನೂ ಓದಿ | Monsoon Hair care: ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಈ ಸಲಹೆ ಪಾಲಿಸಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಲಘು ಮಳೆಯಾಗುವ ಸಾಧ್ಯತೆ ಹೆಚ್ಚು. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ‘C ಮತ್ತು 21 ° C ಆಗಿರಬಹುದು.

Exit mobile version