ಬೆಂಗಳೂರು: ರಾಜ್ಯದಲ್ಲಿ ಬುಧವಾರ ಚದುರಿದಂತೆ ಮಳೆಯ ಸಿಂಚನವಾಗಲಿದೆ. ದಕ್ಷಿಣ ಒಳನಾಡಲ್ಲಿ ಮಧ್ಯಮ ಮಳೆಯಾದರೆ, ಮಲೆನಾಡು ಹಾಗೂ ಕರಾವಳಿಯಲ್ಲಿ ಹಗುರದಿಂದ ಕೂಡಿದ (rain news) ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಎಂದಿನಂತೆ ಒಣಹವೆ (Dry weather) ಮುಂದುವರಿಯಲಿದೆ.
ಇಲ್ಲೆಲ್ಲ ವರ್ಷಧಾರೆ
ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಮತ್ತು ಮಂಡ್ಯದಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೊಡಗು ಮತ್ತು ಹಾಸನದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸೂಚನೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗಲಿದೆ.
ಇದನ್ನೂ ಓದಿ: Winter Cape Dress Fashion: ಚಳಿಗಾಲದ ಫ್ಯಾಷನ್‌ಗೆ ಬಂತು ಆಕರ್ಷಕ ಕೇಪ್ ಡ್ರೆಸ್
ಮುಕ್ಕಾಲು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ಇತ್ತ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣವೇ ಇರಲಿದೆ.
ಇತ್ತ ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಬಿಸಿಲ ವಾತಾವರಣ ಇರಲಿದ್ದು, ಒಣಹವೆ ಮುಂದುವರಿಯಲಿದೆ. ಉತ್ತರ ಕನ್ನಡ ಹಾಗೂ ಉಡುಪಿಯಲ್ಲೂ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.
ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ -16 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 15 ಡಿ.ಸೆ
ಗದಗ: 31 ಡಿ.ಸೆ – 15ಡಿ.ಸೆ
ಹೊನ್ನಾವರ: 34 ಡಿ.ಸೆ- 22 ಡಿ.ಸೆ
ಕಲಬುರಗಿ: 32 ಡಿ.ಸೆ – 17 ಡಿ.ಸೆ
ಬೆಳಗಾವಿ: 31 ಡಿ.ಸೆ – 15 ಡಿ.ಸೆ
ಕಾರವಾರ: 36 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ