ಬೆಂಗಳೂರು/ ಚಿಕ್ಕಮಗಳೂರು: ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಹಲವು ಭಾಗಗಳಲ್ಲಿ 2 ಗಂಟೆಗೂ ಹೆಚ್ಚು ಸಮಯ ಧಾರಾಕಾರ (Karnataka Weather Forecast) ಮಳೆಯಾಗಿದೆ. ನೆಮ್ಮಾರು, ತನಿಕೋಡು, ಶೃಂಗೇರಿ, ಮೆಣಸೆ ಸೇರಿದಂತೆ ಹಲವು ಕಡೆ ಭರ್ಜರಿ (Rain News) ಮಳೆಯಾಗಿದೆ. ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ತಾಲೂಕಿನ ಸಿರಿಮನೆ ಜಲಪಾತದ ನೀರಿನ ಮಟ್ಟವು ಹೆಚ್ಚಳಗೊಂಡಿದೆ.
ಅ.17ರಂದು ಕರಾವಳಿ, ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಸುರಿಯಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: World Spine Day : ಬೆನ್ನು ಮೂಳೆ ಮುರಿಯುವ ಮುನ್ನ ಇರಲಿ ಕಾಳಜಿ!
ಉಷ್ಣಾಂಶ ಏರಿಕೆ
ಬಾಗಲಕೋಟೆ, ಗದಗ, ಕೊಪ್ಪಳ, ಕಲಬುರಗಿ, ರಾಯಚೂರಿನ ಕೆಲವೆಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ತುಮಕೂರು ಜಿಲ್ಲೆಯಲ್ಲೂ ಒಂದೆರಡು ಕಡೆಗಳಲ್ಲಿ 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಭಾನುವಾರ ನೈರುತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲಗೊಂಡಿತ್ತು. ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಉತ್ತರ ಕನ್ನಡದ ಹಳಿಯಾಳದಲ್ಲಿ 3 ಸೆಂ.ಮೀ ಮಳೆಯಾಗಿದೆ. ಚಿಕ್ಕನಹಳ್ಳಿಯಲ್ಲಿ ಗರಿಷ್ಠ ಉಷ್ಣಾಂಶ 34.9 ಡಿ.ಸೆ ದಾಖಲಾಗಿದೆ. ಕಡಿಮೆ ಉಷ್ಣಾಂಶ 19.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ