ಬೆಂಗಳೂರು: ನೈರುತ್ಯ ಮುಂಗಾರು ಕರ್ನಾಟಕದ ಕೆಲವು ಭಾಗಗಳಲ್ಲಿ ಅಂತ್ಯವಾಗಿದ್ದು, ಹಿಂಗಾರು ಪ್ರವೇಶವಾಗಿದೆ. ಮುಂಗಾರು ಮಳೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ, ಉತ್ತರ ಒಳನಾಡಿನಲ್ಲಿ (Karnataka Weather) ದುರ್ಬಲವಾಗಿತ್ತು. ಮುಂದಿನ 24 ಗಂಟೆಯಲ್ಲಿ ಕರಾವಳಿ, ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ.
ಭಾರಿ ಮಳೆ ಮುನ್ನೆಚ್ಚರಿಕೆ
ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಮಳೆಯಾಗಬಹುದು.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣರುತ್ತದೆ. ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ತಾಪಮಾನ ಏರಿಕೆ
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ 3-4 ಡಿಗ್ರಿಗಳಷ್ಟು ಮತ್ತು ಕೆಲವು ಕಡೆಗಳಲ್ಲಿ 2-3 ಡಿಗ್ರಿಗಳಷ್ಟು ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗಲಿದೆ.
ಇದನ್ನೂ ಓದಿ: Fire Accident: ಅತ್ತಿಬೆಲೆ ಪಟಾಕಿ ದುರಂತ; ಮತ್ತೊಬ್ಬ ಕಾರ್ಮಿಕ ಮೃತ, ಸಾವಿನ ಸಂಖ್ಯೆ 15ಕ್ಕೇರಿಕೆ
ಇಲ್ಲೆಲ್ಲ ಮಳೆ ಅಬ್ಬರ
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆಯು ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ 7 ಸೆಂ.ಮೀ ದಾಖಲಾಗಿದೆ. ಉಳಿದಂತೆ ಮದ್ದೂರು, ಸರಗೂರಲ್ಲಿ ತಲಾ 6 ಸೆಂ.ಮೀ, ವಿರಾಜಪೇಟೆ, ಚನ್ನಪಟ್ಟಣದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಶಿಗ್ಗಾಂವ, ಸಾಲಿಗ್ರಾಮ, ಹುಣಸೂರು, ಪೊನ್ನಂಪೇಟೆ, ಮಡಿಕೇರಿ, ಮಂಡ್ಯದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಪುತ್ತೂರು, ಕೊಳ್ಳೇಗಾಲ, ನಾಪೋಕ್ಲು, ಮೂರ್ನಾಡು, ಕೊಟ್ಟಿಗೆಹಾರದಲ್ಲಿ ತಲಾ 3 ಸೆಂ.ಮೀ, ಮಣಿ, ಮಂಗಳೂರಲ್ಲಿ ತಲಾ 2 ಮಳೆಯಾಗಿದೆ. ಕುಂದಾಪುರ, ಸುಳ್ಯ, ಕೃಷ್ಣರಾಜಪೇಟೆ ಶ್ರೀರಂಗಪಟ್ಟಣ, ಎಲೆಕ್ಟ್ರಾನಿಕ್ ಸಿಟಿ ಎಆರ್‌ಜಿ, ಚಾಮರಾಜನಗರ, ಅರಕಲಗೂಡು, ಭಾಗಮಂಡಲ, ಸೋಮವಾರಪೇಟೆ, ರಾಮನಗರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 34.7 ಡಿ.ಸೆ ದಾಖಲಾಗಿದೆ. ವಿಜಯಪುರಯಲ್ಲಿ ಕಡಿಮೆ ಉಷ್ಣಾಂಶ 18.8 ಡಿ.ಸೆ ದಾಖಲಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 21 ಡಿ.ಸೆ
ಗದಗ: 33 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 30 ಡಿ.ಸೆ – 20 ಡಿ.ಸೆ
ಕಾರವಾರ: 33 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ