Site icon Vistara News

Karnataka Weather: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿ ವಿವಿಧೆಡೆ ಭಾರಿ ಮಳೆ ಸಾಧ್ಯತೆ!

Karnataka Weather

ಬೆಂಗಳೂರು: ಆ.22ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರಿ ಮಳೆ (Rain News) ಸುರಿಯುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಆ. 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ
ಆ.24ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಆ.27ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ

ಗಾಳಿಯ ವೇಗ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀ ವರೆಗೆ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಚಾಲ್ತಿಯಲ್ಲಿರುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31° C ಮತ್ತು 22° C ಆಗಿರಬಹುದು.

ಇದನ್ನೂ ಓದಿ | Almatti Dam: ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಡೆಂಗ್ಯೂ ಮಧ್ಯೆ ಝಿಕಾ ವೈರಸ್‌ ಆತಂಕ; ಸೋಂಕು ತಡೆಗೆ ಮಾರ್ಗಸೂಚಿ ಪ್ರಕಟ

Zika Virus Case

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳ ಏರಿಕೆಯೊಂದಿಗೆ, ಝಿಕಾ ವೈರಸ್ ಸೋಂಕಿನ ಪ್ರಕರಣಗಳು (Zika Virus Case) ವರದಿಯಾಗುತ್ತಿರುವುದು (7 ಪ್ರಕರಣಗಳು) ಜನರಲ್ಲಿ ಆತಂಕ ಮೂಡಿಸಿದೆ. ಈಡಿಸ್ ಸೊಳ್ಳೆಗಳಲ್ಲಿ ಝಿಕಾ ವೈರಸ್ ಪತ್ತೆಯಾಗಿರುವುದು (2 ಜಿಲ್ಲೆಗಳಲ್ಲಿ) ಆತಂಕದ ವಿಷಯವಾಗಿದೆ. ಈಡಿಸ್ ಲಾರ್ವಾ ನಿರ್ಮೂಲನೆಯು ಸಮರ್ಪಕವಾಗಿ ನಡೆದಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಹಾಗೂ ಝಿಕಾ ವೈರಸ್ ಸೋಂಕು ಹರಡುವಿಕೆ ನಿಯಂತ್ರಿಸಬಹುದು. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್‌ ಅವರು ಸುತ್ತೋಲೆ ಹೊರಡಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಿಗದಿತವಾಗಿ ಮತ್ತು ಪ್ರತಿ ಶುಕ್ರವಾರ ಲಾರ್ವಾ ನಿರ್ಮೂಲನಾ ದಿನವೆಂದು ಘೋಷಿಸಿ, ಸಮರೋಪಾದಿಯಲ್ಲಿ ಲಾರ್ವಾ ನಿರ್ಮೂಲನೆಯನ್ನು ಫಲಿತಾಂಶ ಆಧಾರಿತ ಚಟುವಟಿಕೆಯನ್ನಾಗಿ ಕೈಗೊಳ್ಳಲು ಈಗಾಗಲೇ ಸಲಹಾ ಪತ್ರಗಳು, ಸುತ್ತೋಲೆಗಳು, ನಿರ್ದೇಶನಗಳನ್ನು ನೀಡಿದ್ದರೂ, ಈ ಚಟುವಟಿಕೆಯು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳದ ಹಿನ್ನೆಲೆ ಝಿಕಾ ವೈರಸ್ ಪ್ರಸರಣವೂ ಕಂಡುಬಂದಿದೆ.

ಝಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲದಿರುವುದರಿಂದ, ಡೆಂಗ್ಯೂ ಜ್ವರದ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ಹಾಗೂ ನಿರ್ವಹಣೆ ಮಾಡಲಾಗುತ್ತದೆ. ಮುಂದುವರಿದು, ಗರ್ಭಿಣಿಯರು ಝಿಕಾ ವೈರಸ್ ಸೋಂಕಿತರಾದಲ್ಲಿ ಹುಟ್ಟುವ ಮಗುವಿನಲ್ಲಿ ಮೈಕ್ರೋಸೆಫಾಲಿ ಹಾಗೂ ಇನ್ನಿತರ ನರಸಂಬಂಧಿ ಅಂಗವೈಕಲ್ಯ (Neurological Anomalies) ಗಳು ಮತ್ತು ದೃಷ್ಟಿ ದೋಷ ಉಂಟಾಗುವ ಸಾಧ್ಯತೆಯು ಅಧಿಕವಾಗಿರುತ್ತದೆ. ಆದ್ದರಿಂದ, ಝಿಕಾ ವೈರಸ್ ಸೋಂಕಿನ ನಿಯಂತ್ರಣಕ್ಕಾಗಿ ಈ ಕೆಳಕಂಡ ಕ್ರಮಗಳನ್ನು ಆಯಾ ಜಿಲ್ಲಾಡಳಿತದ ಮೇಲ್ವಿಚಾರಣೆಯಲ್ಲಿ, ಕಟ್ಟುನಿಟ್ಟಾಗಿ ಕೈಗೊಳ್ಳಲು ಸೂಚಿಸಿದೆ.

ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಮನವಿ

ಇದನ್ನೂ ಓದಿ | Zika Virus : ಆನೇಕಲ್‌ನಲ್ಲಿ ಆರು ಮಂದಿಗೆ ಝಿಕಾ ವೈರಸ್ ಪತ್ತೆ; 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಜೋನ್‌

Exit mobile version