ಬೆಂಗಳೂರು: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ (Karnataka Weather Forecast) ಆಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 17.2 ಡಿ.ಸೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಮುಂದಿನ ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ.
ಒಳನಾಡು ಹಾಗೂ ಕರಾವಳಿ, ಮಲೆನಾಡಿನ ಕೆಲವು ಕಡೆಗಳಲ್ಲಿ ಮಳೆ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವೊಮ್ಮೆ ಸಾಧಾರಣದಿಂದ ಜೋರು ಮಳೆ ಸುರಿಯಲಿದೆ.
ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ ಉಷ್ಣಾಂಶ 19 ಡಿ.ಸೆ ಇರಲಿದೆ.
ನ.28 ರಿಂದ ಡಿ.3 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಯಾದಗಿರಿ, ವಿಜಯಪುರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಮಂಡ್ಯದಲ್ಲಿ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ: Child trade : ಮಕ್ಕಳ ಮಾರಾಟದ ಬೃಹತ್ ಜಾಲ ಪತ್ತೆ; ಹೊಟ್ಟೆಯಲ್ಲಿ ಇರುವಾಗಲೇ ಬುಕಿಂಗ್!
ಒಣ ಹವೆ ಮುಂದುವರಿಕೆ
ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ ಹಾಗೂ ಚಾಮರಾಜನಗರ, ಹಾಸನ, ಮೈಸೂರಿಗೆ ಯಾವುದೇ ಮಳೆಯ ಸೂಚನೆ ಇಲ್ಲ. ಬದಲಿಗೆ ಒಣಹವೆ ಮುಂದುವರಿಯಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 19ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 30 ಡಿ.ಸೆ – 18 ಡಿ.ಸೆ
ಕಾರವಾರ: 34 ಡಿ.ಸೆ – 23 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ