Site icon Vistara News

Karnataka Weather : ಬೆಂಗಳೂರು ಸೇರಿ ಮಲೆನಾಡಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ!

Rain News

ಬೆಂಗಳೂರು: ರಾಜ್ಯದಲ್ಲಿ ಅ.15ರಿಂದ 17ರವರೆಗೆ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ (Karnataka Weather Forecast) ಇದೆ. ಮಲೆನಾಡು ಭಾಗದಲ್ಲಿ ಭರ್ಜರಿ ಮಳೆ (Rain News) ಸೂಚನೆ ಇದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯೆತೆಯೂ ಇದೆ.

ಇದನ್ನೂ ಓದಿ: Road Accident : ಅಡುಗೆ ಎಣ್ಣೆ ತುಂಬಿದ ಲಾರಿ ಪಲ್ಟಿ; ಕ್ಯಾನ್‌ ಹಿಡಿದು ಮುಗಿಬಿದ್ದ ಜನರು

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ಶನಿವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಬಂಡೀಪುರದಲ್ಲಿ 5, ಕನಕಪುರ, ಮದ್ದೂರಲ್ಲಿ ತಲಾ 4 ಸೆಂ.ಮೀ, ಮಳವಳ್ಳಿ 2, ಮೂಲ್ಕಿಯಲ್ಲಿ 1 ಸೆಂ.ಮೀ ಮಳೆಯಾಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 35.8 ಡಿ.ಸೆ ದಾಖಲಾಗಿದೆ. ವಿಜಯಪುರ ಮತ್ತು ಚಿಕ್ಕನಹಳ್ಳಿಯಲ್ಲಿ ಕಡಿಮೆ ಉಷ್ಣಾಂಶ 16.2 ಡಿ.ಸೆ. ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version