Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ - Vistara News

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ

Karnataka Weather: ಆ.16ರಂದು ಕೂಡ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

Karnataka Weather
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಗಸ್ಟ್ 15ರಂದು ಗುರುವಾರ ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಮೈಸೂರು, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.

ಇನ್ನು ಉತ್ತರ ಕನ್ನಡ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಮತ್ತು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಅದೇ ರೀತಿ ಆ.16ರಂದು ಕೂಡ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಹಾವೇರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆ.17ರವರೆಗೆ ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಹವಾಮಾನ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ | Multivitamins: ನಮಗೆ ವಿಟಮಿನ್‌ ಪೂರಕಗಳು ಅಗತ್ಯವೆಂದು ತಿಳಿಯುವುದು ಹೇಗೆ?

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 22° C ಆಗಿರಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Reliance Foundation: ಡಿಗ್ರಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ರಿಲಯನ್ಸ್ ಫೌಂಡೇಷನ್‌ನಿಂದ ವಿದ್ಯಾರ್ಥಿ ವೇತನ

Reliance Foundation: ರಿಲಯನ್ಸ್ ಫೌಂಡೇಷನ್‌ನಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನವನ್ನು ವಿತರಿಸುವುದಕ್ಕಾಗಿ ಅರ್ಜಿಗಳನ್ನು ಕರೆದಿರುವುದಾಗಿ ಘೋಷಣೆ ಮಾಡಿದೆ. ಈ ಮೂಲಕವಾಗಿ ಭಾರತದಾದ್ಯಂತ ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ 5,100 ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ, ಬೆಂಬಲಿಸಿ, ಮಾರ್ಗದರ್ಶನ ನೀಡಲಾಗುತ್ತದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Reliance Foundation
Koo

ಮುಂಬೈ: ರಿಲಯನ್ಸ್ ಫೌಂಡೇಷನ್‌ನಿಂದ (Reliance Foundation) 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನವನ್ನು ವಿತರಿಸುವುದಕ್ಕಾಗಿ ಅರ್ಜಿಗಳನ್ನು ಕರೆದಿರುವುದಾಗಿ ಘೋಷಣೆ ಮಾಡಿದೆ. ಈ ಮೂಲಕವಾಗಿ ಭಾರತದಾದ್ಯಂತ ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ 5,100 ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ, ಬೆಂಬಲಿಸಿ, ಮಾರ್ಗದರ್ಶನ ನೀಡಲಾಗುತ್ತದೆ.

ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನದ ಗುರಿಯು, ಭಾರತ ಬೆಳವಣಿಗೆ ಗಾಥೆಯನ್ನು ಮುನ್ನಡೆಸುವುದರಲ್ಲಿ ಮುಂಚೂಣಿಯಲ್ಲಿ ಇರುವುದಕ್ಕೆ ಯುವ ಜನರನ್ನು ಸಬಲಗೊಳಿಸುವುದು, ಉತ್ಕೃಷ್ಟತೆಯನ್ನು ಪೋಷಿಸುವ ಗುರಿಯನ್ನು ಇರಿಸಿಕೊಂಡಿದೆ., ಆ ಮೂಲಕ ಆರ್ಥಿಕ ಹೊರೆಯಿಲ್ಲದೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಸಬಲಗೊಳಿಸುತ್ತದೆ.

ಇದನ್ನೂ ಓದಿ: Director of ED: ಜಾರಿ ನಿರ್ದೇಶನಾಲಯ ಪೂರ್ಣಾವಧಿ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ

ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ಸ್ಕಾಲರ್‌ಶಿಪ್‌ಗಳು ನವಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿರುವ, ಭವಿಷ್ಯಕ್ಕೆ ಉಪಯುಕ್ತವಾದ ಎಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನ ಈ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿರುವ 100 ಅಸಾಧಾರಣ- ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುತ್ತದೆ. ಎಲ್ಲ ವಿದ್ಯಾರ್ಥಿ ವೇತನಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯ ಆಧಾರದ ಮೇಲೆ ನೀಡಲಾಗುತ್ತದೆ ಮತ್ತು ಪದವಿ ಕಾರ್ಯಕ್ರಮಗಳ ಅವಧಿಯನ್ನು ಒಳಗೊಂಡಿರುತ್ತದೆ. ಸಮಾಜದ ಪ್ರಯೋಜನಕ್ಕಾಗಿ ದೊಡ್ಡದಾಗಿ ಯೋಚಿಸುವ, ಹಸಿರು ಮತ್ತು ಡಿಜಿಟಲ್ ಚಿಂತನೆ ಮಾಡುವ ಅಸಾಧಾರಣ ಪ್ರತಿಭೆಗಳನ್ನು ಗುರುತಿಸಲು ಮತ್ತು ಬೆಳವಣಿಗೆಗೆ ನೆರವು ನೀಡುವುದಕ್ಕಾಗಿ ಈ ಉಪಕ್ರಮವನ್ನು ರೂಪಿಸಲಾಗಿದೆ.

ಸಮಗ್ರವಾದ ಬೆಂಬಲ ಹಾಗೂ ಉದಾರವಾದ ಹಣಕಾಸಿನ ಅನುದಾನದ ಮೂಲಕವಾಗಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಹಾಗೂ ವೃತ್ತಿಪರ ಆಕಾಂಕ್ಷೆಯನ್ನು ಈಡೇರಿಸಿಕೊಳ್ಳುವುದಕ್ಕೆ ಈ ವಿದ್ಯಾರ್ಥಿವೇತನವು ನೆರವು ನೀಡುತ್ತದೆ. ಮೊದಲ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಾಗಿದ್ದು, ಭಾರತದೊಳಗೆ ಇರುವಂಥ ಶಿಕ್ಷಣ ಸಂಸ್ಥೆಯಿಂದ ಪೂರ್ಣಾವಧಿಗೆ, ನಿಯಮಿತ ಶಿಕ್ಷಣ ಪಡೆಯುತ್ತಿರುವಂತವರು ಅರ್ಜಿ ಸಲ್ಲಿಸುವುದಕ್ಕೆ ಅರ್ಹರಾಗಿರುತ್ತಾರೆ.

ಅಂಕ- ಆರ್ಥಿಕ ಸ್ಥಿತಿಯ ಮಾನದಂಡ

ರಿಲಯನ್ಸ್ ಫೌಂಡೇಷನ್ ಪದವಿ ಶಿಕ್ಷಣ ಪಡೆಯುತ್ತಿರುವವರಿಗೆ ನೀಡುವ ವಿದ್ಯಾರ್ಥಿ ವೇತನವು ಪ್ರತಿಭಾವಂತ ವಿದ್ಯಾರ್ಥಿಗಳು ಯಶಸ್ವಿ ವೃತ್ತಿಪರರಾಗುವ ತಮ್ಮ ಕನಸು ನನಸಾಗಿಸಿಕೊಳ್ಳುವುದಕ್ಕೆ ಮತ್ತು ಭಾರತದ ಭವಿಷ್ಯದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಅವರ ಸಾಮರ್ಥ್ಯವನ್ನು ಹೊರತರುವುದಕ್ಕೆ ಪ್ರಯತ್ನಿಸುತ್ತದೆ. ಪದವಿ ಕಾಲೇಜು ಶಿಕ್ಷಣಕ್ಕಾಗಿ ಅಂಕ- ಆರ್ಥಿಕ ಸ್ಥಿತಿಯ ಮಾನದಂಡದ ಆಧಾರದ ಮೇಲೆ 5,000 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು.

ಇದನ್ನೂ ಓದಿ: Album Song: ಅನಿವಾಸಿ ಕನ್ನಡಿಗರ ‘ಹನಿ ಹನಿ’ ಆಲ್ಬಂ ಸಾಂಗ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

ಪದವಿ ವಿದ್ಯಾರ್ಥಿಗಳಿಗೆ ರೂ. 2 ಲಕ್ಷ

ಈ ಅನುದಾನದ ಜತೆಗೆ ರೂ. 2 ಲಕ್ಷ ಪದವಿ ವಿದ್ಯಾರ್ಥಿಗಳಿಗೆ ಮತ್ತು ರೂ. 6 ಲಕ್ಷ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ರಿಲಯನ್ಸ್ ಫೌಂಡೇಷನ್ ಸ್ಕಾಲರ್‌ಶಿಪ್‌ಗಳು ವಿದ್ಯಾರ್ಥಿಗಳು ಮಾರ್ಗದರ್ಶನ ಪಡೆಯುವುದಕ್ಕೆ, ವೃತ್ತಿಪರ ಬೆಳವಣಿಗೆ ಜತೆಗೆ ವೃತ್ತಿ ಸಲಹೆಗಾಗಿ ಉದ್ಯಮದ ನಾಯಕರು ಮತ್ತು ತಜ್ಞರ ಜತೆಗೆ ಸಂವಹನಕ್ಕೆ ಅವಕಾಶ ದೊರಕಿಸುತ್ತದೆ. ಕೌಶಲಗಳನ್ನು ಹೆಚ್ಚಿಸಲು ಕಾರ್ಯಾಗಾರಗಳು, ಸೆಮಿನಾರ್‌ಗಳು ಮತ್ತು ಕಾರ್ಯಕ್ರಮಗಳ ಮೂಲಕ ನಾಯಕತ್ವದ ಅಭಿವೃದ್ಧಿ ಅವಕಾಶಗಳು, ಜತೆಗೆ ಸಮುದಾಯದ ತೊಡಗಿಸಿಕೊಳ್ಳುವಿಕೆಯೊಂದಿಗೆ ಸೇವೆ ಹಾಗೂ ಪ್ರಚಾರ ಕಾರ್ಯಕ್ರಮಗಳ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ.

ಶಿಕ್ಷಣ ಎಂಬುದು ರಿಲಯನ್ಸ್ ಫೌಂಡೇಷನ್‌ನ ಮಾಡುತ್ತಿರುವುದರಲ್ಲಿಯೇ ಅತ್ಯಂತ ಪ್ರಮುಖ ಕೆಲಸವಾಗಿದೆ. 2022ರ ಡಿಸೆಂಬರ್ ನಲ್ಲಿ ರಿಲಯನ್ಸ್ ಸಂಸ್ಥಾಪಕ-ಅಧ್ಯಕ್ಷ ಧೀರೂಭಾಯಿ ಅಂಬಾನಿ ಅವರ 90ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಮಾತನಾಡಿ, ಮುಂದಿನ 10 ವರ್ಷಗಳಲ್ಲಿ ರಿಲಯನ್ಸ್ ಫೌಂಡೇಷನ್‌ನ ಹೆಚ್ಚುವರಿ ಬದ್ಧತೆಯಾಗಿ 50,000 ಸ್ಕಾಲರ್‌ಶಿಪ್‌ಗಳನ್ನು ಘೋಷಿಸಿದರು, ಇದು ಭಾರತದ ಅತಿದೊಡ್ಡ ಖಾಸಗಿ ವಿದ್ಯಾರ್ಥಿವೇತನವಾಗಿದೆ. ಅಂದಿನಿಂದ, ಪ್ರತಿ ವರ್ಷ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಇಲ್ಲಿಯವರೆಗೆ, ರಿಲಯನ್ಸ್ 23,000 ಉನ್ನತ ಶಿಕ್ಷಣ ವಿದ್ಯಾರ್ಥಿವೇತನವನ್ನು ಒದಗಿಸಿದೆ. ರಿಲಯನ್ಸ್ ಫೌಂಡೇಷನ್‌ನಿಂದ ಮಾರ್ಗದರ್ಶನ ಹಾಗೂ ವಿದ್ಯಾರ್ಥಿವೇತನ ಪಡೆದಂತ ಪ್ರತಿಭಾವಂತರು ಲಾಭದಾಯಕ ವೃತ್ತಿಗಳು ಮತ್ತು ಶೈಕ್ಷಣಿಕ ಹಾಗೂ ವೃತ್ತಿಪರ ಪ್ರಯಾಣ ಪ್ರಾರಂಭಿಸಿದ್ದಾರೆ. ಈ ವರ್ಷದ ಅರ್ಜಿ ಆಹ್ವಾನವು ಪ್ರತಿಭಾವಂತ ವಿದ್ಯಾರ್ಥಿಗಳ ಮತ್ತೊಂದು ಸಮೂಹಕ್ಕೆ ಈ ಲಾಭದಾಯಕ ಪ್ರಯಾಣದಿಂದ ಪ್ರಯೋಜನ ಪಡೆಯುವ ಅವಕಾಶವನ್ನು ದೊರಕಿಸುತ್ತದೆ.

ಇದನ್ನೂ ಓದಿ: Government Employees: ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ.17ಕ್ಕೆ ಅಭಿನಂದನಾ ಸಮಾರಂಭ, ಕಾರ್ಯಾಗಾರ: ಸಿ.ಎಸ್. ಷಡಾಕ್ಷರಿ

ಅರ್ಜಿ ಸಲ್ಲಿಕೆ ಹೇಗೆ?

ವಿದ್ಯಾರ್ಥಿಗಳು www.scholarships.reliancefoundation.org ಈ ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಪದವಿ ವಿದ್ಯಾರ್ಥಿಗೆ ಅರ್ಹತೆ ಮತ್ತು ಆರ್ಥಿಕ ಹಿನ್ನೆಲೆಯ ಮೌಲ್ಯಮಾಪನವನ್ನು ಒಳಗೊಂಡಿದೆ. ಸ್ನಾತಕೋತ್ತರ ಪದವಿ ವಿದ್ಯಾರ್ಥಿವೇತನಕ್ಕಾಗಿ, ಶೈಕ್ಷಣಿಕ ಸಾಧನೆಗಳು, ವೈಯಕ್ತಿಕ ಹೇಳಿಕೆಗಳು ಮತ್ತು ಸಂದರ್ಶನಗಳು ಈ ಎಲ್ಲವೂ ಭಾರತದಾದ್ಯಂತದ ಪ್ರತಿಭೆಗಳನ್ನು ಗುರುತಿಸಲು ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆಯ ಭಾಗವಾಗಿದೆ. ಅರ್ಜಿಗಳನ್ನು ಸಲ್ಲಿಸುವುದಕ್ಕೆ 6ನೇ ಅಕ್ಟೋಬರ್ 2024 ಅಂತಿಮ ದಿನಾಂಕವಾಗಿದೆ ಎಂದು ತಿಳಿಸಿದೆ.

Continue Reading

ಬೆಂಗಳೂರು

Arun Yogiraj: ʼವಿಶ್ವ ಶ್ರೇಷ್ಠ ಕನ್ನಡಿಗ 2024ʼ ಪ್ರಶಸ್ತಿಗೆ ಶ್ರೀರಾಮ ವಿಗ್ರಹದ ರೂವಾರಿ ಅರುಣ್ ಯೋಗಿರಾಜ್‌ ಆಯ್ಕೆ

Arun Yogiraj: ಅಮೇರಿಕಾದ ಸಿಯಾಟಲ್ ನಗರದಲ್ಲಿನ ಸಹ್ಯಾದ್ರಿ ಕನ್ನಡ ಸಂಘ ನೀಡುವ, ಪ್ರತಿಷ್ಠಿತ ವಿಶ್ವ ಶ್ರೇಷ್ಠ ಕನ್ನಡಿಗ 2024ನೇ ಸಾಲಿನ ಪ್ರಶಸ್ತಿಗೆ ಹೆಮ್ಮೆಯ ಕನ್ನಡಿಗ ಖ್ಯಾತ ಶಿಲ್ಪಿ ಅಯೋಧ್ಯೆ ಶ್ರೀರಾಮ ವಿಗ್ರಹದ ನಿರ್ಮಾತೃ ಡಾ. ಅರುಣ್ ಯೋಗಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Arun Yogiraj
Koo

ಬೆಂಗಳೂರು: ಅಮೇರಿಕಾದ ಸಿಯಾಟಲ್ ನಗರದಲ್ಲಿನ ಸಹ್ಯಾದ್ರಿ ಕನ್ನಡ ಸಂಘ ನೀಡುವ, ಪ್ರತಿಷ್ಠಿತ ವಿಶ್ವ ಶ್ರೇಷ್ಠ ಕನ್ನಡಿಗ 2024ನೇ ಸಾಲಿನ ಪ್ರಶಸ್ತಿಗೆ ಹೆಮ್ಮೆಯ ಕನ್ನಡಿಗ ಖ್ಯಾತ ಶಿಲ್ಪಿ ಅಯೋಧ್ಯೆ ಶ್ರೀರಾಮ ವಿಗ್ರಹದ ನಿರ್ಮಾತೃ ಡಾ. ಅರುಣ್ ಯೋಗಿರಾಜ್ (Arun Yogiraj) ಅವರನ್ನು ಆಯ್ಕೆ ಮಾಡಲಾಗಿದೆ.

ಸಿಯಾಟಲ್ ನಗರದಲ್ಲಿ ಇಂದು ನಡೆದ ಸಹ್ಯಾದ್ರಿ ಕನ್ನಡ ಸಂಘದ ಪದಾಧಿಕಾರಿಗಳ ಸಭೆಯಲ್ಲಿ, ಸಂಘದ ಚೇರ್ಮನ್ ಮನು ಗೊರೂರು ಈ ವಿಷಯವನ್ನು ಪ್ರಕಟಿಸಿದರು ಹಾಗೂ ಸೆಪ್ಟೆಂಬರ್ 7ರಂದು ಸಿಯಾಟಲ್‌ನ ಬೆನಾರೋಯಾ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: Government Employees: ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ.17ಕ್ಕೆ ಅಭಿನಂದನಾ ಸಮಾರಂಭ, ಕಾರ್ಯಾಗಾರ: ಸಿ.ಎಸ್. ಷಡಾಕ್ಷರಿ

ಡಾ. ಅರುಣ್ ಯೋಗಿರಾಜ್ ಅವರು ಶ್ರೀರಾಮ ವಿಗ್ರಹವನ್ನು ಮಾತ್ರವಲ್ಲದೆ ಹಲವಾರು ಶಿಲ್ಪ ಕಲಾಕೃತಿಗಳನ್ನು ರಚಿಸಿದ್ದಾರೆ. ಕಳೆದ ವರ್ಷ ಈ ಪ್ರಶಸ್ತಿಯನ್ನು ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಗಿತ್ತು.

ಇದನ್ನೂ ಓದಿ: Multivitamins: ನಮಗೆ ವಿಟಮಿನ್‌ ಪೂರಕಗಳು ಅಗತ್ಯವೆಂದು ತಿಳಿಯುವುದು ಹೇಗೆ?

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷೆ ಸುಷ್ಮಾ ಪ್ರವೀಣ್, ಪದಾಧಿಕಾರಿಗಳಾದ ಆದರ್ಶ, ಅರುಣ್, ಆಶ್ವಿನ್, ಚೇತನ, ವಿಜಯ ಬ್ಯಾಡಗಿ, ಜಗನ್ ಕುಮಾರ್ ಹಾಗೂ ತೃಪ್ತಿ ಮನು ಉಪಸ್ಥಿತರಿದ್ದರು.

Continue Reading

ತುಮಕೂರು

Shira News: ಉದ್ಯೋಗ ಕೌಶಲಕ್ಕಾಗಿ ಶಿರಾದಲ್ಲಿ ಸ್ಕಿಲ್ ಯುನಿವರ್ಸಿಟಿ ಸ್ಥಾಪನೆ; ಟಿ.ಬಿ. ಜಯಚಂದ್ರ

Shira News: ಶಿರಾದಲ್ಲಿ ಸ್ಕಿಲ್ ಯುನಿವರ್ಸಿಟಿ ಸ್ಥಾಪಿಸಲು ಉದ್ದೇಶಿಸಿದ್ದು, ತರಬೇತಿ ನೀಡಲು ಮುಂಬೈನ ಒಂದು ಯುನಿವರ್ಸಿಟಿ ಮುಂದೆ ಬಂದಿದೆ. ಅದಕ್ಕಾಗಿ 20 ಎಕರೆ ಜಮೀನು ಕೇಳಿದ್ದಾರೆ. ಶೀಘ್ರ ಈ ಬಗ್ಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಾ ಶಾಸಕ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.

VISTARANEWS.COM


on

Shira News
Koo

ಶಿರಾ: ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಸೇರಿದಂತೆ ಇತರೆ ವಿದ್ಯಾಭ್ಯಾಸ ಮಾಡಿದ ಯುವಕ-ಯುವತಿಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಪಡೆಯಲು ಬೇಕಾದ ಕೌಶಲ್ಯ ತರಬೇತಿ ಪಡೆಯಲು ಶಿರಾದಲ್ಲಿ (Shira News) ಸ್ಕಿಲ್ ಯುನಿವರ್ಸಿಟಿ ಸ್ಥಾಪಿಸಲು ಉದ್ದೇಶಿಸಿದ್ದು, ತರಬೇತಿ ನೀಡಲು ಮುಂಬೈನ ಒಂದು ಯುನಿವರ್ಸಿಟಿ ಮುಂದೆ ಬಂದಿದೆ. ಅದಕ್ಕಾಗಿ 20 ಎಕರೆ ಜಮೀನು ಕೇಳಿದ್ದಾರೆ. ಶೀಘ್ರ ಈ ಬಗ್ಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಾ ಶಾಸಕ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ತಿಳಿಸಿದರು.

ನಗರದ ಮಿನಿ ವಿಧಾನ ಸೌಧದಲ್ಲಿ ಮಂಗಳವಾರ ನಡೆದ ಶಿರಾ ಕೈಗಾರಿಕಾ ಪ್ರದೇಶದಲ್ಲಿರುವ ವಿವಿಧ ಕಾರ್ಖಾನೆ ಮಾಲೀಕರು, ಮುಖ್ಯಸ್ಥರು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Album Song: ಅನಿವಾಸಿ ಕನ್ನಡಿಗರ ‘ಹನಿ ಹನಿ’ ಆಲ್ಬಂ ಸಾಂಗ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

ತಾಲೂಕಿನ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಅರಸಿ ಬೆಂಗಳೂರು ಸೇರಿದಂತೆ ಇತರೆಡೆ ಹೋಗದೆ ಸ್ಥಳೀಯವಾಗಿಯೇ ಉದ್ಯೋಗ ಪಡೆಯಲಿ ಎನ್ನುವ ಉದ್ದೇಶ ಈಡೇರಬೇಕು. ಆದ್ದರಿಂದ ಇಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ನೀಡಲಾಗಿದೆ. ಸ್ಥಳೀಯವಾಗಿ ಪ್ರತಿಭಾವಂತರಿದ್ದಾರೆ, ಅವರಿಗೆ ಸರಿಯಾದ ತಾಂತ್ರಿಕ ತರಬೇತಿ ನೀಡಿ ಉದ್ಯೋಗಾವಕಾಶ ನೀಡಿ ಎಂದು ಸೂಚಿಸಿದರು.

ಇದೇ ಸಂದರ್ಭದಲ್ಲಿ ಕೆಐಎಡಿಬಿ ಅಧಿಕಾರಿಗಳು ಕೈಗಾರಿಕಾ ವಸಹತುಗಳ ಪ್ರದೇಶದಲ್ಲಿ ನೀರಿನ ಕೊರತೆ ಉಂಟಾಗುತ್ತಿದೆ. ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ನಾಲ್ಕು ಕೊಳವೆ ಬಾವಿ ಕೊರೆಸಲಾಗಿದೆ ಆದರೂ ನೀರಿನ ಕೊರತೆ ಉಂಟಾಗುತ್ತಿದೆ ಆದ್ದರಿಂದ ಹೇಮಾವತಿ ನೀರನ್ನು ಕೈಗಾರಿಕಾ ವಸಹತು ಪ್ರದೇಶಕ್ಕೆ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಕೈಗಾರಿಕಾ ವಸಹತು ಪ್ರದೇಶಕ್ಕೆ ಹತ್ತಿರವಿರುವ ಗುಮ್ಮನಹಳ್ಳಿ ಕೆರೆಯಿಂದ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆ

ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಶೀಘ್ರವಾಗಿ ಶಿರಾದಲ್ಲಿ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಶಾಸಕ ಟಿ.ಬಿ. ಜಯಚಂದ್ರ ತಿಳಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ʼಸಾರ್ಕೋಮಾ ಕ್ಯಾನ್ಸರ್‌ʼ ಜಾಗೃತಿಗಾಗಿ ಎಚ್‌ಸಿಜಿಯಿಂದ 5ಕೆ ವಾಕಥಾನ್

ಈ ಸಂದರ್ಭದಲ್ಲಿ ತಹಸೀಲ್ದಾರ್ ಡಾ. ದತ್ತಾತ್ರೆಯ ಜೆ. ಗಾದಾ, ತಾ.ಪಂ. ಇಒ ಹರೀಶ್, ಪೌರಾಯುಕ್ತ ರುದ್ರೇಶ್, ಕೆಐಎಡಿಬಿ ಅಧಿಕಾರಿಗಳು ಹಾಗೂ ವಿವಿಧ ಕಾರ್ಖಾನೆ ಮಾಲೀಕರು, ಮುಖ್ಯಸ್ಥರು, ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Murder Case: ಪತ್ನಿಯನ್ನು ಸ್ಮಶಾನಕ್ಕೆ ಕರೆದೊಯ್ದು ಕೊಲೆಗೈದ ಪತಿ!

Murder Case: ಬೆಂಗಳೂರಿನ ಬನಶಂಕರಿ 6ನೇ ಹಂತದ ಜಟ್ಟಿಗನಹಳ್ಳಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

VISTARANEWS.COM


on

Murder Case
Koo

ಬೆಂಗಳೂರು: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪತಿ ಕೊಲೆಗೈದಿರುವ ಘಟನೆ (Murder Case) ನಗರದ ಬನಶಂಕರಿ ಲೇಔಟ್‌ನಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆರೋಪಿ ಗಂಡನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಗೌರಿ (26) ಮೃತ ಮಹಿಳೆ. ನಾಗೇಶ್‌ ಕೊಲೆ ಆರೋಪಿ. ಬನಶಂಕರಿ 6ನೇ ಹಂತದ ಜಟ್ಟಿಗನಹಳ್ಳಿಯಲ್ಲಿ ಘಟನೆ ನಡೆದಿದೆ. ಮಂಗಳವಾರ ಸಂಜೆ 7.30 ಸುಮಾರಿಗೆ ಕೊಲೆ ನಡೆದಿರುವುದು ಬೆಳಕಿಗೆ ಬಂದಿದ್ದು, ಇಂದು ಬೆಳಗ್ಗೆ ಸ್ಥಳೀಯರು ನೋಡಿ 112ಗೆ ಕರೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಮೃತದೇಹವನ್ನು ಆರ್.ಆರ್.ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

7 ರಿಂದ 8 ವರ್ಷಗಳ ಹಿಂದೆ ನಾಗೇಶ್ ಹಾಗೂ ಗೌರಿ ಮದುವೆ ಆಗಿದ್ದರು. ಆಗಾಗ ಕೌಟುಂಬಿಕ ಸಮಸ್ಯೆಯಿಂದ ಇವರು ಜಗಳ ಮಾಡಿಕೊಳ್ಳುತ್ತಿದ್ದರು. 5 ವರ್ಷಗಳಿಂದ ಬೇರೆ ಊರಲ್ಲಿ ಹೆಂಡತಿಯನ್ನು ಇಟ್ಟಿದ್ದ ನಾಗೇಶ್, 3 ದಿನಗಳ ಹಿಂದೆ ಪತ್ನಿಯನ್ನು ಮನೆಗೆ ಕರೆತಂದಿದ್ದ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಸ್ಮಶಾನಕ್ಕೆ ಕರೆದೊಯ್ದು ಪತ್ನಿಯನ್ನು ಗಂಡ ನಾಗೇಶ್ ಕೊಲೆ ಮಾಡಿದ್ದಾನೆ. ಸದ್ಯ ಆತನಿಗಾಗಿ ಕೆಂಗೇರಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ | Kolkata Doctor Murder Case: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆರೋಪಿ ಸಿಬಿಐ ವಶಕ್ಕೆ

ಅಪರಿಚಿತ ವ್ಯಕ್ತಿಯಿಂದ ಮಹಿಳೆ ಕೊಲೆ

ಕೋಲಾರ: ಮಹಿಳೆಯನ್ನು ಅಪರಿಚಿತ ವ್ಯಕ್ತಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮಳಬಾಗಿಲು ನಗರದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ನಗರ ಪೊಲೀಸರು ಹಾಗೂ ಶಾಸಕ ಸಂವೃದ್ಧಿ ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಲೆಗೆ ನಿಖರಕಾರಣ ತಿಳಿದು ಬಂದಿಲ್ಲ. ಕೊಲೆ ಮಾಡಿ ಮನೆಯವರ ಚೀರಾಟಕ್ಕೆ ಹೆದರಿ ವ್ಯಕ್ತಿ ಓಡಿ ಹೋಗಿದ್ದಾನೆ. ದಿವ್ಯ (43) ಮೃತ ಮಹಿಳೆ. ಸುಂಕಲೇಔಟ್ ಬಡಾವಣೆಯಲ್ಲಿ ಘಟನೆ ನಡೆದಿದೆ. ದಿವ್ಯ ಅವರು ಮುಡಿಯನೂರು ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟವಾಗಿ ಯುವಕ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡು (Cooker Blast) ಯುವಕನೊಬ್ಬ ಮೃತಪಟ್ಟು, ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೆನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮೃತ ಹಾಗೂ ಗಾಯಗೊಂಡ ಯುವಕ ಇಬ್ಬರೂ ಉತ್ತರ ಪ್ರದೇಶ ಮೂಲದವರಾಗಿದ್ದಾರೆ.

ಉತ್ತರ ಪ್ರದೇಶ ಮೂಲದ ಮೋಸಿನ್ ಮೃತ. ಸಮೀರ್‌ ಗಾಯಾಳು. ಜೆ.ಪಿ.ನಗರದ ಆರನೇ ಹಂತದಲ್ಲಿ ಘಟನೆ ನಡೆದಿದ್ದು, ಕುಕ್ಕರ್‌ನ ಪ್ರೆಷರ್ ಹೆಚ್ಚಾಗಿ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಬೆನ್ನಲ್ಲೆ ಪುಟ್ಟೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ವಿಕ್ಟೋರಿಯಾ ಸುಟ್ಟಗಾಯ ವಿಭಾಗದಲ್ಲಿ ಸಮೀರ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಚಿಕಿತ್ಸೆ ಫಲಿಸದೇ ಮೋಸಿನ್ ಎಂಬಾತ ಮೃತಪಟ್ಟಿದ್ದಾನೆ. ಈತನಿಗೆ ಸುಮಾರು ಶೇ.60 ಸುಟ್ಟಗಾಯಗಳಾಗಿದ್ದವು.

ಕುಕ್ಕರ್ ಸ್ಫೋಟಗೊಂಡ ಬೆನ್ನಲ್ಲೇ ದೊಡ್ಡ ಪ್ರಮಾಣದ ಶಬ್ದ ಬಂದಿದ್ದು, ಮನೆಯಲ್ಲಿ ಇದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ ಮುಂದುವರಿದಿದೆ.

ಇದನ್ನೂ ಓದಿ | Sexual Abuse: ದಲಿತ ಬಾಲಕಿಯನ್ನು ಅಪಹರಿಸಿ ಇಸ್ಲಾಂಗೆ ಮತಾಂತರ; ಮುಸ್ಲಿಂ ಧರ್ಮಗುರು ಬಂಧನ

ಜೋರಾಗಿ ಶಬ್ದ ಬಂತು, ಪಕ್ಕದ ಬಿಲ್ಡಿಂಗ್‌ನಲ್ಲಿದ್ದ ನಾವೆಲ್ಲಾ ಓಡುತ್ತಾ ಹೊರಗೆ ಬಂದೆವು. ಅವರಿಗೆ ಮೈಯೆಲ್ಲಾ ಸುಟ್ಟ ಗಾಯ ಆಗಿತ್ತು. ಇಬ್ಬರನ್ನೂ ಆಟೋದಲ್ಲಿ ಆಸ್ಪತ್ರೆಗೆ ಕಳಿಸಿದೆವು. ಇಬ್ಬರೂ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದರಂತೆ. ಇಬ್ಬರೇ ರೂಮ್‌ನಲ್ಲಿ ಇದ್ದರು ಎಂದು ಗೊತ್ತಿದೆ. ಅವರು ಮಾತನಾಡೋ ಪರಿಸ್ಥಿತಿಯಲ್ಲಿ ಇರಲಿಲ್ಲ ಎಂದು ಸ್ಥಳೀಯ ಮಂಜು ಹೇಳಿದ್ದಾರೆ.

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ!

Vidhana Soudha
Vidhana Soudha

ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ (Vidhana Soudha) ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಬುಧವಾರ ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ.

ಟ್ರೆಕ್ಕಿಂಗ್ ಹೋಗಿ ಪೃಥ್ವಿ ನಾಪತ್ತೆಯಾಗಿದ್. ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ | ಇದನ್ನೂ ಓದಿ: Physical Abuse : ತಪಾಸಣೆಗೆ ಬಂದ ರೋಗಿಗಳಿಬ್ಬರನ್ನು ಅತ್ಯಾಚಾರ ಮಾಡಿದ ಸರ್ಕಾರಿ ವೈದ್ಯ; ಜೂನಿಯರ್​ ವೈದ್ಯರ ಪೆಟ್ಟು ತಿಂದು ಐಸಿಯು ಸೇರಿದ ಆರೋಪಿ

Continue Reading
Advertisement
Kolkata Doctor Murder Case
ದೇಶ30 mins ago

Kolkata Doctor Murder Case: ಟ್ರೈನಿ ವೈದ್ಯೆಯ ಹತ್ಯೆ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಭಾರೀ ಲಾಠಿಚಾರ್ಜ್‌

Rajamarga
ಅಂಕಣ32 mins ago

ರಾಜಮಾರ್ಗ ಅಂಕಣ: ಸ್ವಾತಂತ್ರ್ಯದ ಕನವರಿಕೆಯಲ್ಲಿ ಮಿಂದೆದ್ದ ಭಾರತ

apple eating
ಆರೋಗ್ಯ54 mins ago

How safe are apples to eat: ನೀವು ತಿನ್ನುವ ಸೇಬು ಎಷ್ಟು ಸುರಕ್ಷಿತ? ಸೇಬು ಬಾಯಿಗಿಡುವ ಮುನ್ನ ಯೋಚಿಸಿ!

Vastu Tips
ಧಾರ್ಮಿಕ2 hours ago

Vastu Tips: ಮನಸ್ಸಿಗೆ ನೆಮ್ಮದಿ, ಮನೆಯಲ್ಲಿ ಸಮೃದ್ಧಿಗಾಗಿ ಇಲ್ಲಿದೆ ಸರಳ ವಾಸ್ತು ಸೂತ್ರ

Karnataka Weather
ಕರ್ನಾಟಕ2 hours ago

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ

Independence day 2024
ದೇಶ2 hours ago

Independence day 2024: ಕೆಂಪು ಕೋಟೆ ಮೇಲೆ ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವದ ಭಾಷಣದ Live ಇಲ್ಲಿ ವೀಕ್ಷಿಸಿ

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ನಷ್ಟ ಸಾಧ್ಯತೆ

Gallantry awards
ಪ್ರಮುಖ ಸುದ್ದಿ9 hours ago

Gallantry Awards: 103 ಶೌರ್ಯ ಪ್ರಶಸ್ತಿ ಪಟ್ಟಿ ಪ್ರಕಟ; ಪಟ್ಟಿಯಲ್ಲಿವೆ 4 ಕೀರ್ತಿ ಚಕ್ರಗಳು

Vinesh Phogat
ಪ್ರಮುಖ ಸುದ್ದಿ10 hours ago

Vinesh Phogat: ವಿನೇಶ್‌ ಪೋಗಟ್‌ಗೆ ಭಾರೀ ಹಿನ್ನಡೆ; ಬೆಳ್ಳಿ ಪದಕ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

duleep trophy
ಕ್ರೀಡೆ10 hours ago

Duleep Trophy: ದುಲೀಪ್‌ ಟ್ರೋಫಿ ತಂಡ ಪ್ರಕಟ; ಪಟ್ಟಿಯಲ್ಲಿಲ್ಲ ಕೊಹ್ಲಿ, ಶರ್ಮಾ ಹೆಸರು- ನಾಲ್ಕು ಟೀಮ್‌ಗಳ ನಾಯಕರು ಇವರೇ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ7 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌