ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ (Karnataka weather Forecast) ಕೆಲವು ಕಡೆಗಳಲ್ಲಿ ಮಳೆಯಾಗುವ (Rain News) ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಇರಲಿದೆ.
ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಚದುರಿದಂತೆ ಹಗುರದಿಂದ ಮಳೆ ಇರಲಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.
ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ.
ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Cyber Crime: ಪಾರ್ಟ್ ಟೈಂ ಜಾಬ್ ಆಮಿಷ; ಲಿಂಕ್ ಕ್ಲಿಕ್ಕಿಸಿ ಕಾಸು ಲೂಟಿ, ಹೋಯಿತು ಕೋಟಿ ಕೋಟಿ!
ಕರಾವಳಿ- ಮಲೆನಾಡಲ್ಲಿ ಉತ್ತಮ ಮಳೆ
ರಾಜ್ಯದಲ್ಲಿ ಶುಕ್ರವಾರದಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಜಯಪುರ (ಚಿಕ್ಕಮಗಳೂರು ಜಿಲ್ಲೆ) 6, ಅಜ್ಜಂಪುರ (ಚಿಕ್ಕಮಗಳೂರು ಜಿಲ್ಲೆ), ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ) ತಲಾ 5 ಸೆಂ.ಮೀ ಮಳೆಯಾಗಿದೆ.
ಹೊಸದುರ್ಗ (ಚಿತ್ರದುರ್ಗ ಜಿಲ್ಲೆ), ಕಡೂರು (ಚಿಕ್ಕಮಗಳೂರು ಜಿಲ್ಲೆ) ತಲಾ 4 ಸೆಂ.ಮೀ ಹಾಗೂ ಕೊಟ್ಟಿಗೆಹಾರ, ಎನ್.ಆರ್.ಪುರ, ತರೀಕೆರೆ, ಯಗಟಿ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಬೇಲೂರು (ಹಾಸನ ಜಿಲ್ಲೆ), ಮೂರ್ನಾಡು (ಕೊಡಗು ಜಿಲ್ಲೆ) ತಲಾ 3 ಸೆಂ.ಮೀ ಮಳೆಯಾಗಿದೆ. ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ) 2 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ (ದಕ್ಷಿಣ ಕನ್ನಡ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ವೈ.ಎನ್.ಹೊಸಕೋಟೆ, ಸಿರಾ (ಎರಡೂ ತುಮಕೂರು ಜಿಲ್ಲೆ), ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ) ತಲಾ 1 ಸೆಂ. ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶ 14.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.