ಬೆಂಗಳೂರು: ಏಪ್ರಿಲ್ 18ರಂದು ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಏಪ್ರಿಲ್ 18 ರಿಂದ 21 ರವರೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಜೊತೆಗೆ ಮಾರುತಗಳು ಬಲವಾಗಿ ಬೀಸುವ ಸಾಧ್ಯತೆಯಿದೆ. ಏಪ್ರಿಲ್ 19ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಇದೇ ರೀತಿಯ ಸ್ಥಿತಿ ಇರಲಿದೆ.
ಇದನ್ನೂ ಓದಿ | Karnataka Weather : ರಭಸವಾದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ; ಇನ್ನೊಂದು ವಾರ ಈ ಜಿಲ್ಲೆಗಳಿಗೆ ಅಲರ್ಟ್
ಏ.23ರವರೆಗೆ ಮುಂದುವರಿಯಲಿದೆ ಮಳೆ
ಏ.19ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು & ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು ಬೀದರ್, ಗದಗ, ಕಲಬುರ್ಗಿ, ರಾಯಚೂರು & ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಅದೇ ರೀತಿ ಏ. 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಏ. 21ರಂದು ಬೆಳಗಾವಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
22ನೇ ಏಪ್ರಿಲ್ 2024 : ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಏ. 23ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ತಾಪಮಾನದ ಮುನ್ಸೂಚನೆ
ಏ.19 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನವು ಕ್ರಮೇಣ 2-3°C ಯಷ್ಟು ಏರುತ್ತದೆ.
ಇದನ್ನೂ ಓದಿ | Eye Protection: ಡಿಜಿಟಲ್ ಪರದೆಗಳಿಂದ ಕಣ್ಣುಗಳನ್ನು ಕಾಪಾಡಿಕೊಳ್ಳುವುದು ಹೇಗೆ?
ಏ.19ರವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಮುಂದಿನ 48 ಗಂಟೆಗಳು ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.