Site icon Vistara News

Karnataka Weather: ನಾಳೆ ಬೆಳಗಾವಿ, ಕೊಪ್ಪಳ ಸೇರಿ ವಿವಿಧೆಡೆ ಮಳೆ; ಮುಂದಿನ 4 ದಿನ ಶಾಖದ ಅಲೆ ತೀವ್ರತೆ ಹೆಚ್ಚಳ!

Karnataka Weather

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 25ರಂದು ಬೆಳಗಾವಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಇನ್ನು ಏಪ್ರಿಲ್ 28 ರವರೆಗೆ ಶಾಖದ ಅಲೆ (Heat wave) ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.‌

ಇಂದು (ಏ.24) ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗು ಸಂಭವಿಸುವ ಸಾಧ್ಯತೆಯಿದೆ. ಏ.26ರಿಂದ ಮೇ 1ರವರೆಗೆ ರಾಜ್ಯದಾದ್ಯಂತ ರಣ ಬಿಸಿಲಿನ ಹಿನ್ನೆಲೆ ಒಣಹವೆ ಇರುವ ಸಾಧ್ಯತೆ ಇದ್ದು, ಮುಂದಿನ 4 ದಿನ ಶಾಖದ ಅಲೆಯ ತೀವ್ರತೆ ಹೆಚ್ಚಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ | Char Dham Yatra 2024: ಈ ಬೇಸಿಗೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಸಿದ್ಧರಾಗಿ! ನೋಂದಣಿ ಮಾಹಿತಿ ಇಲ್ಲಿದೆ

ಶಾಖದ ಅಲೆಯ ಎಚ್ಚರಿಕೆ

ಏ.24ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಶಾಖದ ಅಲೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಏ.25ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.27ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.28ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಪಮಾನದ ಮುನ್ಸೂಚನೆ

ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

ಇನ್ನು ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಅಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37° C ಮತ್ತು 23 °C ಇರುವ ಸಾಧ್ಯತೆ ಇದೆ.

ಕೊಡಗಿನಲ್ಲಿ ಮನೆ ಮೇಲೆ ಮರ ಬಿದ್ದು ಮಹಿಳೆಗೆ ಗಾಯ

ಕೊಡಗು: ರಾಜ್ಯದಲ್ಲಿ ಬುಧವಾರ ಬೆಳಗ್ಗೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಹಾಗೂ ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಮಳೆ ಸುರಿದಿದೆ. ಇನ್ನು ಮಂಗಳವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಯು ಕೊಡಗಿನಲ್ಲಿ ಅವಾಂತರ ಸೃಷ್ಟಿಸಿದ್ದು, ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

ಪೊನ್ನಂಪೇಟೆ ತಾಲೂಕಿನ ಕಾರೆಕಂಡಿ ಹಾಡಿಯಲ್ಲಿ ಘಟನೆ ನಡೆದಿದೆ. ಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಮರ ಬಿದ್ದಿದ್ದರಿಂದ ಸೋಮ ಎಂಬುವವರ ಪತ್ನಿ ಭೋಜಮ್ಮ ಗಾಯಗೊಂಡಿದ್ದು, ಮನೆ ಬಳಿ ನಿಲ್ಲಿಸಿದ್ದ ಕಾರು, ಸ್ಕೂಟಿ, ಆಟೋರಿಕ್ಷಾ ಜಖಂಗೊಂಡಿವೆ. ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಗಾಯಗೊಂಡ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

Exit mobile version