ಬೆಂಗಳೂರು: ಮುಂದಿನ 48 ಗಂಟೆವರೆಗೂ ರಾಜ್ಯದಲ್ಲಿ ಒಣಹವೆ (Dry Weather) ಮೇಲುಗೈ ಸಾಧಿಸಲಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು, ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ ಎಂದು ಅಂದಾಜಿಸಲಾಗಿದೆ. ಈ ನಡುವೆ ಅಂತೂ ಹವಾಮಾನವು ಕಣ್ಣಾಮುಚ್ಚಾಲೆ ಆಟವನ್ನು ಆಡುವಂತೆ (Karnataka Weather Forecast) ಭಾಸವಾಗುತ್ತಿದೆ.
ಬಹುತೇಕ ಭಾಗಗಳಲ್ಲಿ ಬೆಳಗ್ಗೆ ವೇಳೆ ಬಿಸಿಲಿನಿಂದ ಕೂಡಿದ ವಾತಾವರಣ ಇರುತ್ತದೆ. ಇನ್ನು ಕೆಲವು ಕಡೆ ಮೋಡ ಕವಿದ ವಾತಾವರಣ ಇರಲಿದೆ. ಇನ್ನು ರಾತ್ರಿಯಾದರೆ ಗಾಢ ಚಳಿಯು ಕಾಡುತ್ತಿದೆ. ರಾತ್ರಿ ಹಾಗೂ ಬೆಳಗಿನ ಜಾವದಲ್ಲಿ ತನ್ನ ಪ್ರಭಾವವನ್ನು ತೋರುತ್ತಿದೆ.
ಬೆಂಗಳೂರಲ್ಲಿ ಮುಂಜಾನೆ ಮಂಜು!
ಬೆಂಗಳೂರಲ್ಲಿ ಬುಧವಾರ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಹೀಗಾಗಿ ಚಳಿಯ ವಾತಾವರಣ ಉಂಟಾಗಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: Star Fashion: ಬೆಂಗಳೂರಿನ ಚುಮು ಚುಮು ಚಳಿಗೆ ಬದಲಾಯಿತು ನಟ ಶೈನ್ ಶೆಟ್ಟಿ ವಿಂಟರ್ ಫ್ಯಾಷನ್!
ಈ ಜಿಲ್ಲೆಗಳಲ್ಲಿ ಒಣಹವೆ
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಬಿಸಿಲಿನ ವಾತಾವರಣ ಇರಲಿದೆ. ರಾತ್ರಿ ವೇಳೆ ಚಳಿಗಾಳಿ ಬೀಸಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ಉಡುಪಿಯಲ್ಲೂ ಸಹ ಇದೇ ರೀತಿಯ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ.
ಇದನ್ನೂ ಓದಿ: Ear Pain During Winter: ಚಳಿಗೆ ಕಿವಿನೋವೇ? ಇಲ್ಲಿ ಕೇಳಿ!
ತಾಪಮಾನ ಏರಿಕೆ
ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದಾಗಿ ಸೆಕೆಯು ಹೆಚ್ಚಾಗಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ -17 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 16 ಡಿ.ಸೆ
ಹೊನ್ನಾವರ: 33 ಡಿ.ಸೆ- 19 ಡಿ.ಸೆ
ಕಲಬುರಗಿ: 33 ಡಿ.ಸೆ – 21 ಡಿ.ಸೆ
ಬೆಳಗಾವಿ: 31 ಡಿ.ಸೆ – 11 ಡಿ.ಸೆ
ಕಾರವಾರ: 34 ಡಿ.ಸೆ – 20 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ