ಬೆಂಗಳೂರು: ರಾಜ್ಯದ ವಿವಿಧೆಡೆ ವಾರಾಂತ್ಯದವರೆಗೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಸುರಿದರೆ, ದಕ್ಷಿಣ ಒಳನಾಡಲ್ಲಿ ಚದುರಿದಂತೆ ಹಾಗೂ ಉತ್ತರ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.
ಡಿ.5, 6ರಂದು ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ ಮತ್ತು ತುಮಕೂರಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯನಗರ, ವಿಜಯಪುರ ಮತ್ತು ಕೊಪ್ಪಳದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದಂತೆ ಶುಷ್ಕ ವಾತಾವರಣ ಇರಲಿದೆ.
ಮಲೆನಾಡಲ್ಲಿ ಕೊಡಗು ಮತ್ತು ಹಾಸನದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಇರಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಭರ್ಜರಿ ಮಳೆ ಸುರಿಯಬಹುದು. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆ ಇದ್ದರೆ, ಉತ್ತರ ಕನ್ನಡದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಬೀಳಬಹುದು.
ಉಳಿದಂತೆ ಬೆಂಗಳೂರು ಸುತ್ತಮುತ್ತ ಜಿಟಿ ಜಿಟಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 27 ಡಿ.ಸೆ -18 ಡಿ.ಸೆ
ಮಂಗಳೂರು: 32 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 27 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 17 ಡಿ.ಸೆ
ಹೊನ್ನಾವರ: 33 ಡಿ.ಸೆ- 22 ಡಿ.ಸೆ
ಕಲಬುರಗಿ: 32 ಡಿ.ಸೆ – 18 ಡಿ.ಸೆ
ಬೆಳಗಾವಿ: 30 ಡಿ.ಸೆ – 16 ಡಿ.ಸೆ
ಕಾರವಾರ: 33 ಡಿ.ಸೆ – 23 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.