Site icon Vistara News

Karnataka Weather : ಹಿಂಗಾರು ಪ್ರವೇಶ ಇನ್ನೆರಡು ದಿನ ತಡ; ನಾಳೆ-ನಾಡಿದ್ದು ಹಗುರ ಮಳೆಯಷ್ಟೇ!

Rain alert

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಮಳೆಯಾಗುವ (Karnataka weather Forecast) ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ (Dry weather) ಇರಲಿದೆ.

ದಕ್ಷಿಣ ಒಳನಾಡಿನ ಮೈಸೂರಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಮಂಡ್ಯ ಮತ್ತು ಚಾಮರಾಜನಗರದಲ್ಲಿ ತುಂತುರು ಮಳೆ ಬೀಳಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು ಮತ್ತು ಹಾಸನ, ಶಿವಮೊಗ್ಗದಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಸಾಧಾರಣ ಹಾಗೂ ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Cow Smugglers : ಮಿಡ್‌ ನೈಟ್‌ ಗೋವು ಕಳ್ಳರನ್ನು ಚೇಸ್‌ ಮಾಡಿದ ಗ್ರಾಮಸ್ಥರು!

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೂಟೆ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಮಂಡ್ಯ, ಬಳ್ಳಾರಿ, ವಿಜಯನಗರ, ತುಮಕೂರು, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.

ಬುಧವಾರ ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಭಾಗಮಂಡಲದಲ್ಲಿ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 36.5 ಡಿ.ಸೆ ಶಿರಾಳಿಯಲ್ಲಿ, ಕಡಿಮೆ ಉಷ್ಣಾಂಶ 17.5 ಡಿ.ಸೆ. ದಾವಣಗೆರೆಯಲ್ಲಿ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version