Site icon Vistara News

Karnataka Weather : ಕರ್ನಾಟಕದಲ್ಲಿ ಮರೆಯಾಗಿ ಹೋಯ್ತಾ ಮಳೆ!

Karnataka weather Forecast

ಬೆಂಗಳೂರು: ರಾಜ್ಯದಲ್ಲಿ ಮಳೆ (Rain News) ಮಾಯವಾಗುತ್ತಿದೆ. ಈಗಾಗಲೇ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇದ್ದರೆ, ಮತ್ತೊಮ್ಮೆ ಬಿಸಿಲಿನೊಂದಿಗೆ ಸೆಕೆಯಾಗಲಿದೆ. ಕೆಲವೆಡೆ ಥಂಡಿ ಗಾಳಿ ಬೀಸಲಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Karnataka Weather Forecast) ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.

ನ.22ರಂದು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಬಹುದು. ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ, ಬಳ್ಳಾರಿಯಲ್ಲಿ ಬುಧವಾರ ಒಣಹವೆ ಇರಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹಗುರ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸೂಚನೆ ಇದ್ದರೆ ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಮಳೆ ಇದ್ದರೆ ಉಳಿದಂತೆ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ.

ಇದನ್ನೂ ಓದಿ: Namma Metro : ಮೆಟ್ರೊದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಕೆಂಪು ಅಂಗಿಯವ ಯಾರು?

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿ.ಸೆ ಇರಲಿದೆ. ಇನ್ನು ವಿಜಯಪುರಲ್ಲಿ ಕನಿಷ್ಠ ಉಷ್ಣಾಂಶ 14.5 ಡಿ.ಸೆ ದಾಖಲಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 18 ಡಿ.ಸೆ
ಗದಗ: 30ಡಿ.ಸೆ – 18 ಡಿ.ಸೆ
ಹೊನ್ನಾವರ: 33 ಡಿ.ಸೆ- 23 ಡಿ.ಸೆ
ಕಲಬುರಗಿ: 33 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 18 ಡಿ.ಸೆ
ಕಾರವಾರ: 34 ಡಿ.ಸೆ – 24 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version