ಬೆಂಗಳೂರು: ರಾಜ್ಯದಲ್ಲಿ ಒಣಹವೆ (Dry Weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಕೆಲವು ಕಡೆ ಬೆಳಗಿನ ಜಾವ ರಸ್ತೆಯು ಕಾಣದಷ್ಟು ದಟ್ಟ ಮಂಜು ಆವರಿಸುತ್ತಿದೆ. ಜತೆಗೆ ಇಬ್ಬನಿ ಬೀಳುತ್ತಿದೆ. ಹಗಲು ಹೊತ್ತು ಉರಿ ಬಿಸಿಲು ಇದ್ದರೆ, ರಾತ್ರಿಯಂದು ಗಾಳಿಯು ವೇಗ ಪಡೆಯುತ್ತಿದೆ.
ರಾಜಧಾನಿ ಬೆಂಗಳೂರಿನ ಹಲವೆಡೆ ದಟ್ಟ ಮಂಜಿನೊಂದಿಗೆ ಚಳಿಯು ಆವರಿಸಲಿದೆ. ಗರಿಷ್ಠ ಉಷ್ಣಾಂಶವು 30 ಹಾಗೂ ಕನಿಷ್ಠ ಉಷ್ಣಾಂಶ 17 ಡಿ.ಸೆ ದಾಖಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಶುಷ್ಕ ವಾತಾವರಣ ಇರಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಮೈಸೂರು, ರಾಮನಗರ, ಮಂಡ್ಯ, ತುಮಕೂರು, ವಿಜಯನಗರದಲ್ಲೂ ಶುಷ್ಕ ವಾತಾವರಣ ಇರಲಿದೆ.
ಇದನ್ನೂ ಓದಿ: Vijay Raghavendra: ಜ.26ಕ್ಕೆ ʻಕೇಸ್ ಆಫ್ ಕೊಂಡಾಣʼ ಬಿಡುಗಡೆ; ಖಾಕಿ ಖದರ್‌ನಲ್ಲಿ ಚಿನ್ನಾರಿ ಮುತ್ತ
ತಾಪಮಾನ ಏರಿಕೆ
ಇನ್ನೂ ರಾಯಚೂರು, ಉಡುಪಿ, ಯಾದಗಿರಿ, ದಕ್ಷಿಣ ಕನ್ನಡ, ಬೆಳಗಾವಿ, ಕಲಬುರಗಿ, ಬಳ್ಳಾರಿ, ಬಾಗಲಕೋಟೆ ಮತ್ತು ತುಮಕೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ನಿಂದ 36 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿದೆ.
ಇತ್ತ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಕಲಬುರಗಿ, ಧಾರವಾಡ, ಚಿತ್ರದುರ್ಗ, ಬೆಂಗಳೂರು ನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿಕ್ಕಮಗಳೂರು, ಹಾವೇರಿ ಸೇರಿ ದಾವಣಗೆರೆ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕನಿಷ್ಠ ತೇವಾಂಶ ಶೇ.25ಕ್ಕಿಂತ ಕಡಿಮೆ ದಾಖಲಾಗಿದೆ.
ಇದನ್ನೂ ಓದಿ: Basavanna cultural leader : ಅಣ್ಣ ಬಸವಣ್ಣ ಇನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ -16 ಡಿ.ಸೆ
ಮಂಗಳೂರು: 32 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 16 ಡಿ.ಸೆ
ಗದಗ: 32 ಡಿ.ಸೆ – 16 ಡಿ.ಸೆ
ಹೊನ್ನಾವರ: 32 ಡಿ.ಸೆ- 21 ಡಿ.ಸೆ
ಕಲಬುರಗಿ: 33 ಡಿ.ಸೆ – 19 ಡಿ.ಸೆ
ಬೆಳಗಾವಿ: 31 ಡಿ.ಸೆ – 13 ಡಿ.ಸೆ
ಕಾರವಾರ: 34 ಡಿ.ಸೆ – 21 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ