ಬೆಂಗಳೂರು: ದಕ್ಷಿಣ ಒಳನಾಡಿ ಕೆಲವು ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಪ್ರದೇಶಗಳಲ್ಲಿ ಒಣ ಹವೆ ಮೇಲುಗೈ (Karnataka Weather Forecast) ಸಾಧಿಸುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಪ್ರದೇಶಗಳಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಒಣಹವೆ ಇರಲಿದೆ.
ಇದನ್ನೂ ಓದಿ: Karnataka Live News: ರಾಜ್ಯದ ಇಂದಿನ ಪ್ರಮುಖ ಸುದ್ದಿಗಳು; ವಿಐಪಿಗಳನ್ನು ಪರಚುತ್ತಿರುವ ಹುಲಿಯುಗುರು!
ಇಲ್ಲೆಲ್ಲ ಒಣಹವೆ
ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 1-2 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಬಳ್ಳಾರಿ, ವಿಜಯನಗರದ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 1-2 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 31 ಡಿ.ಸೆ – 17 ಡಿ.ಸೆ
ಮಂಗಳೂರು: 32 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 18 ಡಿ.ಸೆ
ಗದಗ: 34 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 17 ಡಿ.ಸೆ
ಕಾರವಾರ: 37 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ