Site icon Vistara News

Karnataka Weather : ಮತ್ತೆ ಮಳೆ ಸೂಚನೆ; ಇಂದು- ನಾಳೆ ಈ ಜಿಲ್ಲೆಗಳಲ್ಲಿ ವರ್ಷಧಾರೆ!

Girl enjoying Rain

ಬೆಂಗಳೂರು: ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಚಾಮರಾಜನಗರ ದಾವಣಗೆರೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ವಿಜಯನಗರದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. ಹಾವೇರಿ, ಗದಗ, ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ಜಿಟಿ ಜಿಟಿ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಯಾದ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡದಲ್ಲಿ ಶುಷ್ಕ ಹವಾಮಾನ ಇರಲಿದೆ.

ಇದನ್ನೂ ಓದಿ: Indian Cooking: ಈ ಭಾರತೀಯ ಅಡುಗೆಗಳು ವಿದೇಶಗಳಲ್ಲೂ ಜನಪ್ರಿಯ!

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ಮಂಗಳೂರು: 32 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 19 ಡಿ.ಸೆ
ಗದಗ: 32 ಡಿ.ಸೆ – 19 ಡಿ.ಸೆ
ಹೊನ್ನಾವರ: 35 ಡಿ.ಸೆ- 20 ಡಿ.ಸೆ
ಕಲಬುರಗಿ: 35 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version