ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಒಣಹವೆ ಇತ್ತು. ಚಾಮರಾಜನಗರದಲ್ಲಿ ಕಡಿಮೆ ಉಷ್ಣಾಂಶ 16.3 ಡಿ.ಸೆ ದಾಖಲಾಗಿದೆ. ಇನ್ನು ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ (Karnataka Weather Forecast) ಇರಲಿದೆ.
ಜತೆಗೆ ಮುಂದಿನ 48 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಉಳಿದಂತೆ ಗುಡುಗು ಮುನ್ನೆಚ್ಚರಿಕೆಯಾಗಲಿ, ತಾಪಮಾನ ಎಚ್ಚರಿಕೆಯಾಗಲಿ ಇಲ್ಲ.
ದಕ್ಷಿಣ ಒಳನಾಡಿನ ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.