Site icon Vistara News

Karnataka Weather : ಮಳೆಗಾಗಿ ನಾಳೆ ಎಲ್ಲ ದೇಗುಲದಲ್ಲೂ ಕುಂಕುಮಾರ್ಚನೆ; ಪ್ರಾರ್ಥನೆಗೆ ಕರಗಿ ನೀರಾಗುವನೇ ವರುಣ

Kunkumarchane For rain in all temples

ಬೆಂಗಳೂರು: ರಾಜ್ಯದಲ್ಲಿ ಮಳೆಯಿಲ್ಲದೆ ಬರ ಪರಿಸ್ಥಿತಿ ನಿರ್ಮಾಣಗೊಂಡಿದೆ. ಮುಂಗಾರು ಕೈ ಕೊಟ್ಟು ಹಿಂಗಾರು ನಿರೀಕ್ಷೆಯಲ್ಲಿರುವ ಜನತೆಗೆ ಆಗೊಮ್ಮೆ ಈಗೊಮ್ಮೆ ವರುಣ ತನ್ನ ದರ್ಶನ (Karnataka Weather Forecast) ನೀಡುತ್ತಿದ್ದಾನೆ. ಮಳೆಯಿಲ್ಲದೆ (Rain News) ಬೆಳೆ ಬಾರದೆ ರೈತರು ಕಂಗಲಾಗಿದ್ದಾರೆ. ಹೀಗಾಗಿ ಉತ್ತಮ ಮಳೆಗಾಗಿ ಮುಜರಾಯಿ ಇಲಾಖೆ ವಿಶೇಷ ಪೂಜೆಗೆ ಮುಂದಾಗಿದೆ.

ಅ.19ರಂದು ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಮಳೆಗಾಗಿ ಕುಂಕುಮಾರ್ಚನೆ ನಡೆಸಲು ಮುಂದಾಗಿದೆ. ದೇವರಿಗೆ ಕುಂಕುಮಾರ್ಚನೆ ಮಾಡಿ ವಿಶೇಷ ಪೂಜೆ ಸಲ್ಲಿಸಲು ನಿರ್ಧರಿಸಲಾಗಿದೆ. ಇಲಾಖೆ ವ್ಯಾಪ್ತಿಯ ಎಲ್ಲಾ ದೇಗುಲಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆಗೆ ಸೂಚನೆ ನೀಡಲಾಗಿದೆ. ಅ.19ರಂದು ಆಗದೆ ಇದ್ದಲಿ 22ರಂದು ಪೂಜೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಕರಾವಳಿಗೆ ಮಳೆ ಅಲರ್ಟ್‌

ಮುಂದಿನ 24 ಗಂಟೆಯಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ (Karnataka Weather Forecast) ಮಳೆಯಾಗಲಿದೆ. ಉತ್ತರ ಒಳನಾಡಿಗೆ ಯಾವುದೇ ಮಳೆ ಸೂಚನೆ ಇಲ್ಲ, ಒಣ ಹವೆ ಇರಲಿದೆ.

ಬೆಂಗಳೂರಲ್ಲಿ ಹಗುರ ಮಳೆ

ಬೆಂಗಳೂರು ಸುತ್ತಮುತ್ತ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬೀಳಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Electric scooter : ಎಲೆಕ್ಟ್ರಿಕ್‌ ಬೈಕ್‌ ಬ್ಯಾಟರಿ ಸ್ಫೋಟಕ್ಕೆ ಹೊತ್ತಿ ಉರಿದ ಮನೆ!

ಉಷ್ಣಾಂಶ ಏರಿಕೆ ಎಚ್ಚರಿಕೆ

ಮಳೆ ಆರ್ಭಟ ಇದ್ದರೂ ಕರಾವಳಿಯ ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಬೀದರ್, ಬೆಳಗಾವಿ, ಧಾರವಾಡ, ಕೊಪ್ಪಳ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಏರಿಕೆ ಆಗಲಿದೆ.

ಚಿತ್ರದುರ್ಗ, ಹಾಸನ, ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ದುರ್ಬಲ

ಮಂಗಳವಾರ ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನ ದುರ್ಬಲವಾಗಿತ್ತು. ಹಲವೆಡೆ ಮಳೆಯಾಗಿರುವ ವರದಿಯಾಗಿದ್ದು, ಪುತ್ತೂರು, ಎನ್‌.ಆರ್‌.ಪುರ, ಬೇಲೂರಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಹಳಿಯಾಳ, ಕಳಸ, ಸಕಲೇಶಪುರದಲ್ಲಿ ತಲಾ 2 ಸೆಂ.ಮೀ, ಗೇರ್ಸೊಪ್ಪ, ಕುಮಟಾ, ಉಪ್ಪಿನಂಗಡಿ, ಭಾಗಮಂಡಲ, ನಾಪೋಕ್ಲು, ಸೋಮವಾರಪೇಟೆ, ಕಮ್ಮರಡಿ, ಕೊಪ್ಪ, ಜಯಪುರ, ತಾಳಗುಪ್ಪದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 34.7 ಡಿ.ಸೆ ಹಾಗೂ ಕಡಿಮೆ ಉಷ್ಣಾಂಶ 18.0 ಡಿ.ಸೆ. ವಿಜಯಪುರ ಮತ್ತು ಚಿಕ್ಕನಹಳ್ಳಿಯಲ್ಲಿ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version