ಬೆಂಗಳೂರು: ಅ.19ರಂದು ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಬಹುತೇಕ ಕಡೆಗಳಲ್ಲಿ ಒಣಹವೆ ಇತ್ತು. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 36.5 ಡಿ.ಸೆ, ಕಡಿಮೆ ಉಷ್ಣಾಂಶ 17.2 ಡಿ.ಸೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಣ್ಣ ಮಳೆ ಹನಿಗಳು (Rain News) ಬೀಳಲಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ (Karnataka Weather Forecast) ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದ ಮಳೆಯಾದರೆ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ರಾಮನಗರದಲ್ಲಿ ಸಾಧಾರಣ ಮಳೆಯಾಗಬಹುದು. ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸಲಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿಯೊಂದರಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಾಗಲಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಇದನ್ನೂ ಓದಿ: Bengaluru News : ಹೆಂಡ ಕುಡಿದ ಮಂಗನಂತಾಡಿದ ಯುವತಿಯರು; ನೋಡಲು ಮುಗಿಬಿದ್ದ ಜನರು
ಮಲೆನಾಡಿನ ಕೊಡಗು, ಚಿಕ್ಕಮಗಳೂರು ಮತ್ತು ಹಾಸನ , ಶಿವಮೊಗ್ಗ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜಿಟಿ ಜಿಟಿ ಮಳೆಯಾಗಬಹುದು. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇಲ್ಲೆಲ್ಲ ಗರಿಷ್ಠ ಉಷ್ಣಾಂಶ ಏರಿಕೆ
ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ, ರಾಯಚೂರು ಸೇರಿ ಕಲಬುರಗಿ ದಕ್ಷಿಣ ಒಳನಾಡಿನ ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ