ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka Weather) ಮುನ್ಸೂಚನೆಯನ್ನು ನೀಡಿದೆ. ವಾರಪೂರ್ತಿ ವಾತಾವರಣವು ಬಿಸಿಲಿನಿಂದ ಕೂಡಿರಲಿದ್ದು, ಬೆಳಗಿನ ಜಾವ ಹಾಗೂ ರಾತ್ರಿಯಂದು ಗಾಳಿಯು ವೇಗ (Dry weather) ಪಡೆಯಲಿದೆ.
ರಾಜಧಾನಿ ಬೆಂಗಳೂರಿನ ಹಲವೆಡೆ ಮುಂಜಾನೆಯಂದು ದಟ್ಟ ಮಂಜು ಆವರಿಸಲಿದೆ. ನಂತರದ ಸಮಯದಲ್ಲಿ ಬಿಸಿಲು ಆವರಿಸಲಿದೆ. ಸಂಜೆ ಹೊತ್ತಿಗೆ ಚಳಿಯು ಹೆಚ್ಚಾಗಿರಲಿದೆ. ಗರಿಷ್ಠ ಉಷ್ಣಾಂಶವು 30 ಹಾಗೂ ಕನಿಷ್ಠ ಉಷ್ಣಾಂಶ 17 ಡಿ.ಸೆ ದಾಖಲಾಗಿದೆ.
ಇದನ್ನೂ ಓದಿ: Elephant Attack : ಕಾಫಿ ಗಿಡದ ಮರೆಯಲ್ಲಿ ನಿಂತು ಇಟಿಎಫ್ ಸಿಬ್ಬಂದಿಯನ್ನು ಅಟ್ಟಾಡಿಸಿದ ಒಂಟಿಸಲಗ
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಇರಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಮೈಸೂರು, ರಾಮನಗರ, ಮಂಡ್ಯ, ತುಮಕೂರು, ವಿಜಯನಗರದಲ್ಲೂ ಶುಷ್ಕ ವಾತಾವರಣ ಇರಲಿದೆ.
ಇದನ್ನೂ ಓದಿ: Road Accidents: ಸಂಕ್ರಮಣದ 24 ಗಂಟೆಯಲ್ಲಿ 9 ಭೀಕರ ಅಪಘಾತ; 15 ಮಂದಿ ಸಾವು
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ -17 ಡಿ.ಸೆ
ಮಂಗಳೂರು: 32 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 15 ಡಿ.ಸೆ
ಗದಗ: 32 ಡಿ.ಸೆ – 15 ಡಿ.ಸೆ
ಹೊನ್ನಾವರ: 34 ಡಿ.ಸೆ- 21 ಡಿ.ಸೆ
ಕಲಬುರಗಿ: 34 ಡಿ.ಸೆ – 19 ಡಿ.ಸೆ
ಬೆಳಗಾವಿ: 31 ಡಿ.ಸೆ – 15 ಡಿ.ಸೆ
ಕಾರವಾರ: 36 ಡಿ.ಸೆ – 20 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ