Site icon Vistara News

Karnataka Weather: ಇನ್ನೆರಡು ದಿನ ರಾಜ್ಯದಲ್ಲಿ ಇಲ್ಲ ಮಳೆ; ಬೆಳಗ್ಗೆ ಬಿಸಿಲು, ಮತ್ತೆಲ್ಲ ಒಣಹವೆ

Dry weather in Karnataka

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ (Rain News) ಯಾವುದೇ ರೀತಿಯ ಮುನ್ಸೂಚನೆ ಇಲ್ಲ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather) ಹೇಳಿದೆ. ಬೆಂಗಳೂರಿನಲ್ಲಿಯೂ ಮೋಡ ಕವಿದ ವಾತಾವರಣ ಇರಲಿದ್ದು, ಬೆಳಗಿನ ಜಾವ ಮಂಜು ಮುಸುಕಿರುತ್ತದೆ. ಹೀಗಾಗಿ ಸ್ವಲ್ಪ ಮಟ್ಟಿಗೆ ಚಳಿಯ ವಾತಾವರಣ ನಿರ್ಮಾಣವಾಗಿರಲಿದೆ.

ಬೆಂಗಳೂರಿನಲ್ಲಿ ಬೆಳಗ್ಗೆ ಹೊತ್ತಿಗೆ ಸಾಮಾನ್ಯವಾಗಿ ಬಿಸಿಲಿನ ವಾತಾವರಣ ಇರಲಿದೆ. ತಿಳಿಯಾದ ವಾತಾವರಣ ಇರಲಿದ್ದು, ಮಳೆಯಾಗುವ (Bangalore Rain) ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಜತೆಗೆ ನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇದ್ದರೆ, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಚಳಿಗಾಳಿ

ದಕ್ಷಿಣ ಒಳನಾಡಿನ (South Inland) ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಬಿಸಿಲಿನ ವಾತಾವರಣ ಇರಲಿದೆ. ರಾತ್ರಿ ವೇಳೆ ಚಳಿಗಾಳಿ ಬೀಸಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲಿನಿಂದ ಕೂಡಿದ ವಾತಾವರಣ ಇರಲಿದೆ.

ಕರಾವಳಿ – ಉತ್ತರ ಒಳನಾಡಲ್ಲಿ ಬಿಸಿಲು

ಉತ್ತರ ಒಳನಾಡಿನ (North Inland) ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್‌, ಕಲಬುರಗಿ ಹಾಗೂ ಯಾದಗಿರಿಯಲ್ಲಿ ಒಣ ಹವೆ ಇರಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ಉಡುಪಿಯಲ್ಲೂ ಸಹ ಬಿಸಿಲು ತನ್ನ ಬಲ ಪ್ರದರ್ಶನವನ್ನು ಮಾಡಲಿದೆ.

ಕರಾವಳಿ, ದಕ್ಷಿಣ ಒಳನಾಡಲ್ಲಿ ಆಗಿರುವ ಮಳೆ

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬುಧವಾರ ಮಳೆಯಾಗಿದೆ. ಆದರೆ, ಉತ್ತರ ಒಳನಾಡಿನಲ್ಲಿ ಒಣ ಹವೆ ವಾತಾವರಣ ಮುಂದುವರಿದಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 1 ಸೆಂ.ಮೀ. ಮಳೆಯಾಗಿದೆ. ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕಡಿಮೆ ಉಷ್ಣಾಂಶವನ್ನು ನೋಡುವುದಾದರೆ ವಿಜಯಪುರದಲ್ಲಿ 12.6 ಡಿ.ಸೆ. ದಾಖಲಾಗಿದೆ.

ಇದನ್ನೂ ಓದಿ: Winter Cape Dress Fashion: ಚಳಿಗಾಲದ ಫ್ಯಾಷನ್‌ಗೆ ಬಂತು ಆಕರ್ಷಕ ಕೇಪ್ ಡ್ರೆಸ್

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 14 ಡಿ.ಸೆ
ಗದಗ: 30 ಡಿ.ಸೆ – 14 ಡಿ.ಸೆ
ಹೊನ್ನಾವರ: 36 ಡಿ.ಸೆ- 22 ಡಿ.ಸೆ
ಕಲಬುರಗಿ: 31 ಡಿ.ಸೆ – 17 ಡಿ.ಸೆ
ಬೆಳಗಾವಿ: 31 ಡಿ.ಸೆ – 15 ಡಿ.ಸೆ
ಕಾರವಾರ: 37 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version