ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Rain News) ಕಡಿಮೆ ಆಗಿದೆ. ಮುಂದಿನ 24 ಗಂಟೆಯಲ್ಲಿ ಹಲವೆಡೆ ಹಗುರದಿಂದ ಕೂಡಿದ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಒಣ ಹವೆ ಮುಂದುವರಿಯುವ ಸಾಧ್ಯತೆ ಇರಲಿದೆ.
ಇದನ್ನೂ ಓದಿ: Fire Accident : ಬೆಂಗಳೂರಲ್ಲಿ ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್; 10 ಜನರ ಪ್ರಾಣ ಉಳಿಸಿತು ಊಟದ ಟೈಂ!
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ, ಕೊಡಗಿನಲ್ಲಿ ಚದುರಿದಂತೆ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಲಘು ಮಳೆಯಾಗಲಿದೆ.
ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಉಡುಪಿಯಲ್ಲಿ 1 ಸೆಂ.ಮೀ ಮಳೆಯಾಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 36.2 ಡಿ.ಸೆ ದಾಖಲಾಗಿದೆ. ಚಿಕ್ಕನಹಳ್ಳಿಯಲ್ಲಿ ಕಡಿಮೆ ಉಷ್ಣಾಂಶ 16.2 ಡಿ.ಸೆ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ