Site icon Vistara News

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Karnataka Weather

ಬೆಂಗಳೂರು: ಈ ಬಾರಿ ಬೇಸಿಗೆಯಲ್ಲಿ ರಾಜ್ಯದಲ್ಲಿ ದಿನೇ ದಿನೇ ತಾಪಮಾನ (Karnataka Weather) ಹೆಚ್ಚಾಗುತ್ತಿರುವುದು ಕಂಡುಬರುತ್ತಿದೆ ಉತ್ತರ ಕರ್ನಾಟಕ ಭಾಗದಲ್ಲಿ ದಾಖಲೆಯ ಉಷ್ಣಾಂಶ ದಾಖಲಾಗುತ್ತಿದೆ. ರಾಯಚೂರಿನಲ್ಲಿ ಭಾನುವಾರ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 43 ಡಿಗ್ರಿ ಸೆ. ಉಷ್ಣಾಂಶ ವರದಿಯಾಗಿದೆ. ಇನ್ನು ಮಂಗಳವಾರವೂ ಕೂಡ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಂಗಳವಾರ ಶಾಖದ ಅಲೆಗಳ ತೀವ್ರತೆ (Heat wave) ಹೆಚ್ಚಾಗುವ ಸಾಧ್ಯತೆ ಇದೆ.

ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಅದೇ ರೀತಿ ಮೇ 6ರಂದು ಮಂಡ್ಯ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

ಶಾಖದ ಅಲೆಯ ಎಚ್ಚರಿಕೆ

ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮೇ 3ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 23°C ಇರುವ ಸಾಧ್ಯತೆ ಇದೆ.

Exit mobile version