ಬೆಂಗಳೂರು: ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (rain News) ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ.
ಇಲ್ಲೆಲ್ಲ ಮಳೆ ಸಾಧ್ಯತೆ
ಡಿ.11 ಮತ್ತು 12ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡದಲ್ಲಿ ಬಿಸಿಲಿನ ವಾತಾವರಣ ಇರಲಿದೆ.
ಗುಡುಗು ಸಹಿತ ಮಳೆ
ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರಲ್ಲೂ ಮಳೆಯಾಗಲಿದೆ.
ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಈ ಜಿಲ್ಲೆಗಳಿಗಿಲ್ಲ ಮಳೆ ತಂಟೆ
ದಕ್ಷಿಣ ಒಳನಾಡಿ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಹಾಗೂ ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆ ಸೂಚನೆ ಇಲ್ಲ. ಶುಷ್ಕ ವಾತಾವರಣವೇ ಮುಂದುವರಿಯಲಿದೆ.
ಇದನ್ನೂ ಓದಿ: New Food Trend: ನಿಮಗೆ ಗೊತ್ತೆ? ಹೊಸ ಆಹಾರ ಟ್ರೆಂಡ್ ಸಸ್ಯಾಹಾರಿ ಮಾಂಸ!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ -20 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 19 ಡಿ.ಸೆ
ಗದಗ: 31 ಡಿ.ಸೆ – 17 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 33 ಡಿ.ಸೆ – 19 ಡಿ.ಸೆ
ಬೆಳಗಾವಿ: 31 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ