Site icon Vistara News

Karnataka weather : ಇನ್ನೊಂದು ವಾರ ಮಳೆ- ಗಾಳಿ, ಬಿಸಿಲು ಒಟ್ಟೊಟ್ಟಿಗೆ ದಾಳಿ

Rain alert issued for Karnataka

ಬೆಂಗಳೂರು: ರಾಜ್ಯದಲ್ಲಿ ಒಂದೊಂದು ಕಡೆ ಒಂದೊಂದು ರೀತಿಯಲ್ಲಿ ಹವಾಮಾನ (Karnataka weather) ಇರಲಿದ್ದು, ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ. ಜನವರಿ 1 ರಿಂದ 7 ದಿನಗಳ ಕಾಲ ಹಗುರದಿಂದ ಕೂಡಿದ ಮಳೆ (Karnataka Rain) ಆಗಲಿದೆ.

ಕೆಲವಡೆ ಬಿಸಿಲು ಹೆಚ್ಚಲಿದ್ದು, ಹಲವೆಡೆ ಶುಷ್ಕ ವಾತಾವರಣವು ಮೇಲುಗೈ ಸಾಧಿಸಲಿದೆ. ಕರಾವಳಿ, ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಕೂಡಿದ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಕಡಿಮಯಾಗುವ ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಚಳಿ ಜತೆಗೆ ಹಗುರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಬೀದರ್‌ ಹೊರತು ಪಡಿಸಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯ ಸಿಂಚನವಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ವಿಜಯನಗರ, ತುಮಕೂರು, ರಾಮನಗರದಲ್ಲಿ ಚಳಿಯ ವಾತಾವರಣ ಇರಲಿದೆ. ಆದರೆ ಚಾಮರಾಜನಗರ, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರಲ್ಲಿ ಮಳೆ ಸೂಚನೆ ಇದೆ.

ಬೆಂಗಳೂರಿನ ವಾತಾವರಣ ಹೀಗಿದೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಒಂದು ವಾರ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಬೆಳಗಿನ ಜಾವ ಮೋಡ ಕವಿಯಲಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Winter Safety Tips For Children: ಚಳಿಗಾಲದಲ್ಲಿ ಕಾಡುವ ಕಾಯಿಲೆಗಳಿಂದ ಮಕ್ಕಳನ್ನು ಹೀಗೆ ಕಾಪಾಡಿ…

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -17 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 15 ಡಿ.ಸೆ
ಗದಗ: 32 ಡಿ.ಸೆ – 14 ಡಿ.ಸೆ
ಹೊನ್ನಾವರ: 36 ಡಿ.ಸೆ- 21 ಡಿ.ಸೆ
ಕಲಬುರಗಿ: 32 ಡಿ.ಸೆ – 18 ಡಿ.ಸೆ
ಬೆಳಗಾವಿ: 31 ಡಿ.ಸೆ – 14 ಡಿ.ಸೆ
ಕಾರವಾರ: 36 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version