Site icon Vistara News

Karnataka Weather : ಬೆಂಗಳೂರು ಬಿಟ್ಟು ಈ ಜಿಲ್ಲೆಗಳಿಗೆ ಮಳೆ ಅಲರ್ಟ್‌

Girl holding Umbrella

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತು ನಾಳೆ ಮಲೆನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ (Rain News) ಮುನ್ಸೂಚನೆ ಇದೆ. ರಾಜ್ಯದ ಒಂದೆರೆಡು ಕಡೆ ಗುಡುಗು, ಮಿಂಚಿನ ಸಾಧ್ಯತೆಯೂ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಲಘು ಮಳೆ ಸಂಭವ (Karnataka weather forecast) ಇದೆ. ಉಳಿದಂತೆ ಎಲ್ಲೆಡೆ ತಾಪಮಾನ ಏರಿಕೆಯೊಂದಿಗೆ ಒಣಹವೆ ಇರಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಮಳೆ

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ಲಘು ಮಳೆಯಾಗಲಿದೆ.

ಒಳನಾಡಲ್ಲಿ ಒಣಹವೆ

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರದ ಕೆಲವು ಕಡೆ ಚದುರಿದಂತೆ ಹಗುರದಿಂದ ಕೂಡಿದ ಮಳೆ ಬೀಳಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ. ಉತ್ತರ ಒಳನಾಡಿನ ಬೆಳಗಾವಿಯೊಂದರಲ್ಲಿ ಮಳೆ ಸಂಭವ ಇದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಮಾಯವಾಯ್ತು ಮಳೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಬೆಳಗ್ಗೆ ಬಿಸಿಲಿನಿಂದ ಕೂಡಿದರೆ ನಂತರ ಮೋಡ ಕವಿದ ವಾತಾವರಣ ಇರಲಿದೆ. ವಾರಾಂತ್ಯದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಗರಿಷ್ಠ ಉಷ್ಣಾಂಶ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 31 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಸಾಧ್ಯತೆ

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ. ಇತ್ತ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ 2-3 ಡಿಗ್ರಿಗಳಷ್ಟು ಗರಿಷ್ಠ ತಾಪಮಾನ ಏರಿಕೆ ಆಗಲಿದೆ.

ಇದನ್ನೂ ಓದಿ: Flag Issue : Lulu Mallನಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ; ಸುಳ್ಳು ಸುದ್ದಿ ಹರಡಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಮೇಲೆ ಕೇಸು

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 20 ಡಿ.ಸೆ
ಗದಗ: 32 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 22 ಡಿ.ಸೆ
ಬೆಳಗಾವಿ: 29 ಡಿ.ಸೆ – 20 ಡಿ.ಸೆ
ಕಾರವಾರ: 32 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version