Site icon Vistara News

karnataka Weather :‌ ಮುಂದಿನ 24 ಗಂಟೆಯಲ್ಲಿ 18 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

karnataka weather Forecast

ಬೆಂಗಳೂರು: ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (karnataka Weather Forecast) ಇರಲಿದೆ. ಮುಂದಿನ 24 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮಲೆನಾಡು ಹಾಗೂ ಕರಾವಳಿಯಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಇದನ್ನೂ ಓದಿ: Acid attack: ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಆ್ಯಸಿಡ್‌ ಎರಚಿದ ದುರುಳ

ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೆಳಗಾವಿ, ಬೀದರ್ ಮತ್ತು ಗದಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆ ಸುರಿಯಲಿದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಇನ್ನು ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಸೂರ್ಯ ಕಣ್ಮರೆಯಾಗಲಿದ್ದಾನೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಬೆಳಗಿನ ಹೊತ್ತು ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನದಂದು ಬಿಸಿಲಿನಿಂದ ಕೂಡಿರಲಿದೆ. ಸಂಜೆ ಅಥವಾ ರಾತ್ರಿಯಂದು ಸಣ್ಣ ಪ್ರಮಾಣದಲ್ಲಿ ಮಳೆ ಜಿನುಗಲಿದೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಸೋಮವಾರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಕೋಲಾರದ ರಾಯಲ್ಪಾಡಲ್ಲಿ 1 ಸೆಂ.ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶವು ವಿಜಯಪುರದಲ್ಲಿ 17.0 ಡಿ.ಸೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version