ಬೆಂಗಳೂರು: ದಕ್ಷಿಣ ಒಳನಾಡಲ್ಲಿ ಗುಡುಗು ಸಹಿತ ಮಳೆಯ ಸಿಂಚನವಾದರೆ, ಕರಾವಳಿ ಹಾಗೂ ಉತ್ತರ ಒಳನಾಡಲ್ಲಿ ಒಣಹವೆ (Dry Weather) ಮುಂದುವರಿಯಲಿದೆ. ಇನ್ನೆರಡು ದಿನಗಳು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಇನ್ನು ಮುಂದಿನ 48 ಗಂಟೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಎಂದಿನಂತೆ ಒಣಹವೆ ಮುಂದುವರಿಯಲಿದೆ.
ಈ ಐದು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ
ದಕ್ಷಿಣ ಒಳನಾಡಿನ ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಥಂಡಿ ಗಾಳಿ ಬೀಸುತ್ತಿದೆ. ಇದರಿಂದಾಗಿ ಜನರು ಚಳಿಯಿಂದ ನಡುಗುವಂತಾಗಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಂಗಳವಾರ ಒಣಹವೆ ಇದ್ದರೆ, ಬುಧವಾರದಂದು ಕೆಲವು ಕಡೆ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
ಇದನ್ನೂ ಓದಿ: IT Raid: ಹಲವೆಡೆ ಆದಾಯ ತೆರಿಗೆ ದಾಳಿ, ಹಬ್ಬಕ್ಕೆ ದೊಡ್ಡ ಮೊತ್ತ ಕೈ ಬದಲಿಸಿದ ಶಂಕೆ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 19 ಡಿ.ಸೆ
ಗದಗ: 29 ಡಿ.ಸೆ – 17 ಡಿ.ಸೆ
ಹೊನ್ನಾವರ: 34 ಡಿ.ಸೆ- 22 ಡಿ.ಸೆ
ಕಲಬುರಗಿ: 33 ಡಿ.ಸೆ – 22 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ