ಬೆಂಗಳೂರು: ಬೆಂಗಳೂರು ಸೇರಿದಂತೆ 13 ಜಿಲ್ಲೆಗಳ ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆ ಆಗಿದೆ. ಮುಂದಿನ 24 ಗಂಟೆಯಲ್ಲಿ ಹಲವೆಡೆ ಹಗುರದಿಂದ ಕೂಡಿದ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.
ಇಲ್ಲೆಲ್ಲ ಮಳೆ
ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಒಣಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಒಣ ಹವೆ ಮುಂದುವರಿಯುವ ಸಾಧ್ಯತೆ ಇರಲಿದೆ.
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ, ಕೊಡಗಿನಲ್ಲಿ ಚದುರಿದಂತೆ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಲಘು ಮಳೆಯಾಗಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ಮಂಗಳೂರು: 31 ಡಿ.ಸೆ – 23ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 21 ಡಿ.ಸೆ
ಗದಗ: 34 ಡಿ.ಸೆ – 19 ಡಿ.ಸೆ
ಹೊನ್ನಾವರ: 32 ಡಿ.ಸೆ- 24 ಡಿ.ಸೆ
ಕಲಬುರಗಿ: 35 ಡಿ.ಸೆ – 22 ಡಿ.ಸೆ
ಬೆಳಗಾವಿ: 31 ಡಿ.ಸೆ – 19 ಡಿ.ಸೆ
ಕಾರವಾರ: 35 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ