ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ (Karnataka Weather Forecast ) ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಚಿಕ್ಕಬಳ್ಳಾಪುರದ ತೊಂಡೇಭಾವಿ 3, ಧರ್ಮಸ್ಥಳ, ಸೋಮವಾರಪೇಟೆ, ವಿರಾಜಪೇಟೆ, ಗೌರಿಬಿದನೂರು ತಲಾ 2, ಅರಕಲಗೂಡು, ಬಂಡೀಪುರ, ಕೊಣನೂರು, ಕುಣಿಗಲ್ ತಲಾ 1 ಸೆಂ.ಮೀ ಮಳೆಯಾಗಿರುವ (Rain News) ವರದಿ ಆಗಿದೆ. ಕಡಿಮೆ ಉಷ್ಣಾಂಶ 16.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಇನ್ನು ಉತ್ತರ ಒಳನಾಡಿನ ಹಾವೇರಿ, ಗದಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಹಾಸನ, ಶಿವಮೊಗ್ಗ ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದ್ದರೆ, ಉತ್ತರ ಕನ್ನಡದಲ್ಲಿ ಹಗುರದಿಂದ ಕೂಡಿದ ಮಳೆಯಾಗಬಹುದು.
ಇದನ್ನೂ ಓದಿ: ನೌಕಾಪಡೆ ಅಧಿಕಾರಿಗಳಿಗೆ ಗಲ್ಲು; ಭಾರತದ ಮನವಿಗೆ ಒಪ್ಪಿದ ಕತಾರ್, ಕಾನೂನು ಹೋರಾಟಕ್ಕೆ ಮುನ್ನಡೆ
ಗುಡುಗು ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದರೆ, ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಭಾರಿ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್
ಮಲೆನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ಬೆಂಗಳೂರಲ್ಲಿ ಬೆಳಗಿನ ಹೊತ್ತು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಜಿಟಿ ಜಿಟಿ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 28 ಡಿ.ಸೆ -20 ಡಿ.ಸೆ
ಮಂಗಳೂರು: 31 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 18 ಡಿ.ಸೆ
ಗದಗ: 31 ಡಿ.ಸೆ – 19 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 30 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 25 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.