Site icon Vistara News

Karnataka Weather : ಕೈ ಕೊಟ್ಟ ಮುಂಗಾರು; ಕೈ ಹಿಡಿಯುತ್ತಾ ಹಿಂಗಾರು?

Boy Holding Umbrella

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಹಿಂದೆ ಸರಿದು, ಹಿಂಗಾರು ಪ್ರವೇಶವಾಗಿದೆ. ಬರಕ್ಕೆ ಮುಕ್ತಿ ನೀಡಿ ಹಿಂಗಾರು ಆಸರೆಯಾಗುತ್ತಾ? ಎಂಬ ಪ್ರಶ್ನೆ ಮೂಡಿದೆ. ಸದ್ಯ ಕರಾವಳಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಇದ್ದರೆ, ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ.

ಈ ಭಾಗದಲ್ಲಿ ಸಾಧಾರಣ ಮಳೆ

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗದಗ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಲಘು ಮಳೆ ಬೀಳಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.

ಕರಾವಳಿಯಲ್ಲಿ ಭಾರಿ ಮಳೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಮಲೆನಾಡಿನ ಹಾಸನ ಮತ್ತು ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನ ಅಲ್ಲಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Teachers Appointment : 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್‌ ಹಸಿರು ನಿಶಾನೆ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 31 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 20 ಡಿ.ಸೆ
ಗದಗ: 32 ಡಿ.ಸೆ – 21 ಡಿ.ಸೆ
ಹೊನ್ನಾವರ: 32 ಡಿ.ಸೆ- 25 ಡಿ.ಸೆ
ಕಲಬುರಗಿ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 31 ಡಿ.ಸೆ – 20 ಡಿ.ಸೆ
ಕಾರವಾರ: 32 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version