Site icon Vistara News

Karnataka Weather : ಚಾಮರಾಜನಗರ, ಮೈಸೂರಲ್ಲಿ ತುಂತುರು ಮಳೆ ಸವಾರಿ

Rain Umbrella karnataka weather forecast

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗಲಿದ್ದು, ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಮಲೆನಾಡಿನ ಕೊಡಗು, ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಹಾಗೂ ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಪ್ರತ್ಯೇಕ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಬಹುದು.

ಬೆಂಗಳೂರಲ್ಲಿ ಮಾಯವಾಯ್ತು ಮಳೆ

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಆದರೆ ಬೆಳಗ್ಗೆ ಬಿಸಿಲಿನಿಂದ ಕೂಡಿರಲಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Mysore Dasara: ಮಟ್ಟಿಗೆ ರಕ್ತ ಬಿದ್ದ ಮೇಲೆಯೇ ಮಹಾರಾಜರ ವಿಜಯಯಾತ್ರೆ! ಇದೇನು ʼವಜ್ರಮುಷ್ಟಿ ಕುಸ್ತಿʼ ಆಚರಣೆ?

ಉಷ್ಣಾಂಶ ಏರಿಕೆ

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಕೊಪ್ಪಳ ಸೇರಿದಂತೆ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 1-2 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ – 20 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 20 ಡಿ.ಸೆ
ಗದಗ: 33 ಡಿ.ಸೆ – 17 ಡಿ.ಸೆ
ಹೊನ್ನಾವರ: 35 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 21 ಡಿ.ಸೆ
ಬೆಳಗಾವಿ: 31 ಡಿ.ಸೆ – 16 ಡಿ.ಸೆ
ಕಾರವಾರ: 37 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್‌ ಮಾಡಿ

Exit mobile version