ಬೆಂಗಳೂರು: ಪೂರ್ವದಲ್ಲಿ ಗಾಳಿಯು ವೇಗವಾಗಿ ಬೀಸುತ್ತಿದ್ದು, ಇದರ ಪ್ರಭಾವದಿಂದಾಗಿ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಉತ್ತರ ಒಳನಾಡಲ್ಲಿ ಹಗುರದಿಂದ ಮಳೆಯಾಗಲಿದ್ದು, ಜತೆಗೆ ಬಹುತೇಕ ಕಡೆಗಳಲ್ಲಿ ಒಣಹವೆಯೇ ಮೇಲುಗೈ ಸಾಧಿಸಲಿದೆ.
ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗಬಹುದೆಂದು ಅಂದಾಜಿಸಲಾಗಿದೆ.
ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ: Vistara Kannada Sambhrama : ʼವಿಸ್ತಾರ ಕನ್ನಡ ಸಂಭ್ರಮʼ ಹಬ್ಬಕ್ಕೆ ಅದ್ಧೂರಿ ಚಾಲನೆ
ಉತ್ತರ ಒಳನಾಡಲ್ಲಿ ಹಗುರ ಮಳೆ
ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು ಹಾಗೂ ಗದಗನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಬೆಳಗಾವಿ, ಯಾದಗಿರಿ ಮತ್ತು ಕಲಬುರಗಿಯಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೀದರ್ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ಮಳೆ ಇದ್ದರೂ ಸೆಕೆ ವಾತಾವರಣ
ಮುಂದಿನ 24 ಗಂಟೆಯಲ್ಲಿ ಒಳನಾಡು ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಜತೆಗೆ ಕೆಲವೆಡೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿ.ಸೆ ಹೆಚ್ಚಾಗುವ ಸಾಧ್ಯತೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ -20 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 21 ಡಿ.ಸೆ
ಗದಗ: 33 ಡಿ.ಸೆ – 21 ಡಿ.ಸೆ
ಹೊನ್ನಾವರ: 33 ಡಿ.ಸೆ- 22 ಡಿ.ಸೆ
ಕಲಬುರಗಿ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 31 ಡಿ.ಸೆ – 18 ಡಿ.ಸೆ
ಕಾರವಾರ: 35 ಡಿ.ಸೆ – 25 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.