Site icon Vistara News

Karnataka Weather: ಕರಾವಳಿ,ಮಲೆನಾಡಲ್ಲಿ ಮಳೆಯಾಟ; ಒಳನಾಡಿನಲ್ಲಿ ನೀರಸ

Karnataka weather Forecast

ಬೆಂಗಳೂರು: ಕರಾವಳಿ ಮತ್ತು ಮಲೆನಾಡಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯದ ಉಳಿದ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ. ಆದರೆ ಒಣ ಹವೆಯೇ ಮೇಲುಗೈ ಸಾಧಿಸಲಿದೆ. ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ. ಬೆಂಗಳೂರಿನ ಕೆಲವು ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಧರ್ಮಸ್ಥಳ, ಉಪ್ಪಿನಂಗಡಿ, ಶೃಂಗೇರಿ, ಸಕಲೇಶಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಕನಿಷ್ಠ ಉಷ್ಣಾಂಶ ವಿಜಯಪುರದಲ್ಲಿ 16.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಇದನ್ನೂ ಓದಿ: ಬೀದಿ ಬದಿ ಬಿದ್ದಿದ್ದ ಸೂಟ್‌ಕೇಸ್‌ನಲ್ಲಿ ಪತ್ತೆಯಾಯ್ತು ಮಹಿಳೆಯ ಶವ; ಯಾರು ಆ ಹಂತಕ?

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -19 ಡಿ.ಸೆ
ಮಂಗಳೂರು: 32 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 19 ಡಿ.ಸೆ
ಗದಗ: 31 ಡಿ.ಸೆ – 17 ಡಿ.ಸೆ
ಹೊನ್ನಾವರ: 33 ಡಿ.ಸೆ- 22 ಡಿ.ಸೆ
ಕಲಬುರಗಿ: 34 ಡಿ.ಸೆ – 22 ಡಿ.ಸೆ
ಬೆಳಗಾವಿ: 31 ಡಿ.ಸೆ – 19 ಡಿ.ಸೆ
ಕಾರವಾರ: 33 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version