Site icon Vistara News

Karnataka Weather : ಮುಂದಿನ ಒಂದು ವಾರ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Rainfall forecast in these districts for the next one week

ಬೆಂಗಳೂರು: ರಾಜ್ಯಾದ್ಯಂತ ಮಳೆಯು (Rain News) ಸಕ್ರಿಯಗೊಂಡಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ (karnataka weather forecast) ಸಾಧ್ಯತೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ಮಧ್ಯಮ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಚದುರಿದ ಮಳೆಯಾಗಬಹುದು. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಮತ್ತು ಹಾವೇರಿಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಗದಗ, ವಿಜಯನಗರ ಮತ್ತು ರಾಯಚೂರಿನ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಒಣಹೆವ ಮೇಲುಗೈ ಸಾಧಿಸಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕು ಇರಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Raja Marga Column : ಇಂದು ಪಟೇಲರ ಜನ್ಮ ದಿನ, ಅವರ ವ್ಯಕ್ತಿತ್ವ ಪ್ರತಿಮೆಗಿಂತಲೂ ಸಾವಿರ ಪಟ್ಟು ಎತ್ತರ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 19 ಡಿ.ಸೆ
ಮಂಗಳೂರು: 32 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 22 ಡಿ.ಸೆ
ಗದಗ: 34 ಡಿ.ಸೆ – 20 ಡಿ.ಸೆ
ಹೊನ್ನಾವರ: 32 ಡಿ.ಸೆ- 22 ಡಿ.ಸೆ
ಕಲಬುರಗಿ: 34 ಡಿ.ಸೆ – 22 ಡಿ.ಸೆ
ಬೆಳಗಾವಿ: 32 ಡಿ.ಸೆ – 20 ಡಿ.ಸೆ
ಕಾರವಾರ: 34 ಡಿ.ಸೆ – 26 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version