Site icon Vistara News

Karnataka Weather : ಥಂಡಿ ಗಾಳಿ ಜತೆಗೆ ಇನ್ನೆರಡು ದಿನ ಮಳೆಯ ಸಿಂಚನ

Rainfall likely in south interior coastal and malnad regions

ಬೆಂಗಳೂರು: ಚಳಿ ನಡುವೆಯು ರಾಜ್ಯದ ಹಲವೆಡೆ ಇನ್ನೆರಡು ದಿನಗಳು ಮಳೆಯಾಗುವ (Rain News) ಮುನ್ಸೂಚನೆ ಇದೆ. ದಕ್ಷಿಣ ಒಳನಾಡಲ್ಲಿ ಶನಿವಾರ ಮಳೆ ಅಬ್ಬರಿಸಿದ್ದರೆ, ಮಲೆನಾಡು ಹಾಗೂ ಕರಾವಳಿ, ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಮುಂದುವರಿಯಲಿದೆ. ಭಾನುವಾರದಂದು ಉತ್ತರ ಒಳನಾಡು ಬಿಟ್ಟು ಉಳಿದ ಎಲ್ಲ ಕಡೆಗಳಲ್ಲಿ ಮಳೆಯಾಗುವ (karnataka weather Forecast) ಸಾಧ್ಯತೆ ಇದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಪ್ರತ್ಯೇಕ ಸ್ಥಳದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಜತೆಗೆ ಸಂಜೆ ನಂತರ ಚಳಿಯು ಹೆಚ್ಚಾಗಲಿದೆ. ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಡಿ. 16-17ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಮಳೆ ನಿರೀಕ್ಷೆ ಇದೆ. ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ವರ್ಷಧಾರೆ ಸಾಧ್ಯತೆ ಇದೆ.

ಇದನ್ನೂ ಓದಿ: Fashion News: ರ‍್ಯಾಂಪ್‌ ಕಳೆ ಹೆಚ್ಚಿಸಿದ ವಜ್ರಾಭರಣಗಳ ಫ್ಯಾಷನ್ ಶೋ!

ಉತ್ತರ ಒಳನಾಡಲ್ಲಿ ಶುಷ್ಕ ವಾತಾವರಣ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಯಾವುದೇ ಮಳೆ ಸೂಚನೆ ಇಲ್ಲ. ಬದಲಿಗೆ ಒಣಹವೆಯೇ ಮುಂದುವರಿಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ದಾವಣಗೆರೆ, ವಿಜಯನಗರದಲ್ಲೂ ಮಳೆ ಸೂಚನೆ ಇಲ್ಲ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 27 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 15ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 30 ಡಿ.ಸೆ – 17 ಡಿ.ಸೆ
ಬೆಳಗಾವಿ: 31 ಡಿ.ಸೆ – 14 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version