Site icon Vistara News

Karnataka Weather: ಕಡಿಮೆ ಆಯಿತೇ ಚಳಿ? ಯಾವ ಜಿಲ್ಲೆಯಲ್ಲಿ ಹೇಗಿದೆ ವಾತಾವರಣ?

Karnataka Weather Reduced cold

ಬೆಂಗಳೂರು: ರಾಜ್ಯದ ಕೆಲವು ಶನಿವಾರ ಒಣ ಹವೆ ಇರಲಿದೆ. ಉತ್ತರ ಕರ್ನಾಟಕ (Uttara Karnataka) ಭಾಗದ ಕೆಲವೆಡೆ ಚಳಿ ಇರಲಿದೆ ಎಂದು ಹೇಳಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಚಳಿ ಪ್ರಮಾಣ ಕಡಿಮೆ ಇದ್ದು, ಬೆಳಗ್ಗೆ ಬಿಸಿಲಿನ ತೀವ್ರತೆ ಇರಲಿದೆ. ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಆದರೆ, ಬೆಳಗಾವಿ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ತನ್ನ ಮುನ್ಸೂಚನಾ ವರದಿಯಲ್ಲಿ ಹೇಳಿದೆ.

ದಕ್ಷಿಣ ಒಳನಾಡಿನಲ್ಲಿ ಹೇಗಿದೆ?

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ ಅಲ್ಪ ಮಟ್ಟಿಗೆ ಚಳಿ ಇರಲಿದೆ. ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಇನ್ನು ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಚಳಿಯ ವಾತಾವರಣ ಇರಲಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ. ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಬೆಳಗಾವಿಯಲ್ಲಿ ಚಳಿಯ ವಾತಾವರಣ

ಬೆಳಗಾವಿಯಲ್ಲಿ ಶನಿವಾರ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಕನಿಷ್ಠ ಉಷ್ಣಾಂಶ 11 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ಉಲ್ಲೇಖಿಸಿದೆ. ಅಂದರೆ, ಈ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಚಳಿ ದಾಖಲಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಬೆಳಗಾವಿಯಲ್ಲಿ ಜನವರಿ 28ರಿಂದ 31 ರವರೆಗಿನ ನಾಲ್ಕು ದಿನ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್‌ ದಾಖಲಾಗಲಿದೆ. ಅಂದರೆ ಬೆಳಗಿನ ವೇಳೆ ಬಿಸಿಲು ಹೆಚ್ಚಾಗಿ ಇರಲಿದ್ದು, ಮುಂಜಾನೆ, ಸಂಜೆ ಮತ್ತು ರಾತ್ರಿ ವೇಳೆ ಚಳಿಯು ಪ್ರಭಾವಳಿ ಬೀರಲಿದೆ. ಮುಂಜಾನೆ ಕೆಲವು ಕಡೆ ದಟ್ಟ ಮಂಜು ಆವರಿಸಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Ear Pain During Winter: ಚಳಿಗೆ ಕಿವಿನೋವೇ? ಇಲ್ಲಿ ಕೇಳಿ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ -18 ಡಿ.ಸೆ
ಮಂಗಳೂರು: 32 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 32 ಡಿ.ಸೆ – 16 ಡಿ.ಸೆ
ಹೊನ್ನಾವರ: 32 ಡಿ.ಸೆ- 18 ಡಿ.ಸೆ
ಕಲಬುರಗಿ: 33 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 11 ಡಿ.ಸೆ
ಕಾರವಾರ: 34 ಡಿ.ಸೆ – 20 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version