Site icon Vistara News

Weather Report: ಇಂದು, ನಾಳೆ ದಕ್ಷಿಣ-ಉತ್ತರ ಒಳನಾಡಲ್ಲಿ ಗುಡುಗು ಸಹಿತ ಮಳೆ; ಬೆಂಗಳೂರಿನ ಸ್ಥಿತಿ ಏನು?

Karnataka Weather Report updates today

ಬೆಂಗಳೂರು: ಬುಧವಾರವೂ ಸೇರಿದಂತೆ ಗುರುವಾರ ರಾಜ್ಯದ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಇನ್ನು ಮುಂದಿನ 48 ಗಂಟೆಗಳನ್ನು ಗಮನಿಸುವುದಾದರೆ ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: VK Sasikala: ಜೈಲಿನಲ್ಲಿ ಶಶಿಕಲಾಗೆ ಐಷಾರಾಮಿ ವ್ಯವಸ್ಥೆ; ಮೂವರು ಅಧಿಕಾರಿಗಳ ಮೇಲಿನ ಪ್ರಕರಣ ರದ್ದು

ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದರೆ, ಮುಂದಿನ 48 ಗಂಟೆಗಳನ್ನು ನೋಡುವುದಾದರೆ ಗಾಳಿಯ ವೇಗವು ತುಸು ತಗ್ಗಲಿದೆ. ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಜತೆಗೆ ಗುಡುಗು, ಮಿಂಚಿನ ಸಾಧ್ಯತೆ ಇರುವುದರಿಂದ ಜನರು ಹೆಚ್ಚಿನ ಮುಂಜಾಗ್ರತೆಯನ್ನು ವಹಿಸುವಂತೆ ಸಲಹೆ ನೀಡಲಾಗಿದೆ.

ಉಷ್ಣಾಂಶದಲ್ಲೂ ಏರಿಕೆ

ರಾಜ್ಯದ ಹಲವು ಕಡೆ ಮಳೆ ಅಬ್ಬರ ತಗ್ಗಲಿದ್ದು, ತಾಪಮಾನದಲ್ಲಿ ಏರಿಕೆಯಾಗುವ ಸಂಭವ ಹೆಚ್ಚಿದೆ. ಮುಂದಿನ 48 ಗಂಟೆಗಳಲ್ಲಿ ಕೆಲವು ಕಡೆಗಳಲ್ಲಿ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಲ್ಲಿ ಹೇಗಿರಲಿದೆ ಹವಾಮಾನ?

ಬೆಂಗಳೂರು ನಗರದಲ್ಲಿ ಬುಧವಾರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದರೂ ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಸಲ ಬಲವಾದ ಬಿರುಗಾಳಿ ಸಹಿತ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಇದನ್ನೂ ಓದಿ: Anthony Albanese: ಬೆಂಗಳೂರಲ್ಲಿ ಶೀಘ್ರ ಆಸ್ಟ್ರೇಲಿಯಾದ ಕಾನ್ಸುಲೇಟ್ ಜನರಲ್ ಆರಂಭ; ಪಿಎಂ ಆಂಥೋನಿ ಅಲ್ಬನೀಸ್

ಬೆಂಗಳೂರಲ್ಲಿ ಮುಂದಿನ 48 ಗಂಟೆಗಳ ಹವಾಮಾನವನ್ನು ನೋಡುವುದಾದರೆ, ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದರೂ ಸಂಜೆ ಅಥವಾ ರಾತ್ರಿಯ ವೇಳೆಗೆ ಭಾರಿ ಬಿರುಗಾಳಿ ಸಹಿತ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ.

Exit mobile version