ಬೆಂಗಳೂರು: ಬೆಂಗಳೂರು, ಉತ್ತರ ಕನ್ನಡ ಸೇರಿದಂತೆ ಬಿಸಿಲು ಹೆಚ್ಚಾಗಲಿದ್ದು, ಧಗೆಯ ವಾತಾವರಣ ಇರಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ (Karnataka Weather Forecast) ಇರಲಿದೆ.
ಇಲ್ಲಷ್ಟೇ ಸಣ್ಣ ಪ್ರಮಾಣದಲ್ಲಿ ಮಳೆ
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ. ಮಲೆನಾಡಿನ ಕೊಡಗಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು ಮತ್ತು ಹಾಸನ, ಶಿವಮೊಗ್ಗದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಭಾಗವಾದ ದಕ್ಷಿಣ ಕನ್ನಡ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Mysore Dasara: ಅ.23ರಂದು ಸಂಜೆ ದಸರಾ ಏರ್ ಶೋ; ಗಮನ ಸೆಳೆದ ಲೋಹದ ಹಕ್ಕಿಗಳ ರಿಹಾರ್ಸಲ್
ಉಷ್ಣಾಂಶಗಳ ಎಚ್ಚರಿಕೆ
ಕರಾವಳಿಯ ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಕಲಬುರಗಿ , ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 31 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 21 ಡಿ.ಸೆ
ಗದಗ: 32 ಡಿ.ಸೆ – 20 ಡಿ.ಸೆ
ಹೊನ್ನಾವರ: 34 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 22 ಡಿ.ಸೆ
ಬೆಳಗಾವಿ: 31 ಡಿ.ಸೆ – 18 ಡಿ.ಸೆ
ಕಾರವಾರ: 35 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ