ಬೆಂಗಳೂರು: ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಮಳೆಯ ಕಣ್ಣಾಮುಚ್ಚಾಲೆ ಆಟಕ್ಕೆ ರೈತರು ಕಂಗೆಟ್ಟು ಹೋಗಿದ್ದಾರೆ. ಈ ನಡುವೆ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುತ್ತಿರುವುದು (Karnataka Weather Forecast) ಸಮಾಧಾನ ತಂದಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ (Karnataka Weather Forecast) ಮಳೆಯಾಗಲಿದೆ. ಉತ್ತರ ಒಳನಾಡಿಗೆ ಯಾವುದೇ ಮಳೆ ಸೂಚನೆ ಇಲ್ಲ. ಬದಲಿಗೆ ತಾಪಮಾನ ಏರಿಕೆ ಆಗಲಿದ್ದು, ಒಣ ಹವೆ ಇರಲಿದೆ.
ಬೆಂಗಳೂರು ಸುತ್ತಮುತ್ತ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಬೆಳಗ್ಗೆ ಬಿಸಿಲಿನಿಂದ ಕೂಡಿದ್ದರೆ, ಮಧ್ಯಾಹ್ನ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬೀಳಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇಲ್ಲೆಲ್ಲ ತಾಪಮಾನ ಏರಿಕೆ ಸಾಧ್ಯತೆ
ಮಳೆ ಆರ್ಭಟ ಇದ್ದರೂ ಕರಾವಳಿಯ ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಬೀದರ್, ಬೆಳಗಾವಿ, ಧಾರವಾಡ, ಕೊಪ್ಪಳ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಏರಿಕೆ ಆಗಲಿದೆ.
ಚಿತ್ರದುರ್ಗ, ಹಾಸನ, ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Lawyer Murder : ಕಾಣೆಯಾಗಿದ್ದ ಲಾಯರ್ ಶವ ಪತ್ತೆ; ಕಲ್ಲಿನಿಂದ ಜಜ್ಜಿ ಮರ್ಡರ್
ದೇವರ ಮೊರೆ ಹೋದ ಮುಜರಾಯಿ
ರಾಜ್ಯದಲ್ಲಿ ಮಳೆಯಿಲ್ಲದೆ ಬರ ಪರಿಸ್ಥಿತಿ ನಿರ್ಮಾಣಗೊಂಡಿದೆ. ಮುಂಗಾರು ಕೈ ಕೊಟ್ಟು ಹಿಂಗಾರು ನಿರೀಕ್ಷೆಯಲ್ಲಿರುವ ಜನತೆಗೆ ಆಗೊಮ್ಮೆ ಈಗೊಮ್ಮೆ ವರುಣ ತನ್ನ ದರ್ಶನ ನೀಡುತ್ತಿದ್ದಾನೆ. ಮಳೆಯಿಲ್ಲದೆ ಬೆಳೆ ಬಾರದೆ ರೈತರು ಕಂಗಲಾಗಿದ್ದಾರೆ. ಹೀಗಾಗಿ ಉತ್ತಮ ಮಳೆಗಾಗಿ ಮುಜರಾಯಿ ಇಲಾಖೆ ವಿಶೇಷ ಪೂಜೆಗೆ ಮುಂದಾಗಿದೆ.
ಅ.19ರಂದು ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಮಳೆಗಾಗಿ ಕುಂಕುಮಾರ್ಚನೆ ನಡೆಸಲು ಮುಂದಾಗಿದೆ. ದೇವರಿಗೆ ಕುಂಕುಮಾರ್ಚನೆ ಮಾಡಿ ವಿಶೇಷ ಪೂಜೆ ಸಲ್ಲಿಸಲು ನಿರ್ಧರಿಸಲಾಗಿದೆ. ಇಲಾಖೆ ವ್ಯಾಪ್ತಿಯ ಎಲ್ಲಾ ದೇಗುಲಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆಗೆ ಸೂಚನೆ ನೀಡಲಾಗಿದೆ. ಅ.19ರಂದು ಆಗದೆ ಇದ್ದಲಿ 22ರಂದು ಪೂಜೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ಮಂಗಳೂರು: 31 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 20 ಡಿ.ಸೆ
ಗದಗ: 34 ಡಿ.ಸೆ – 21 ಡಿ.ಸೆ
ಹೊನ್ನಾವರ: 33 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 20 ಡಿ.ಸೆ
ಕಾರವಾರ: 35 ಡಿ.ಸೆ – 25 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ