Site icon Vistara News

Karnataka Weather : ಈ ವಾರ ಪೂರ್ತಿ ಈ ಜಿಲ್ಲೆಗಳಲ್ಲಿ ಮಳೆಯ ಸಿಂಚನ

These districts will receive rain throughout the week.

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದ್ದರೆ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಒಣ ಹವೆ ಇರಲಿದೆ. ಕೆಲವು ಕಡೆ ಮೋಡ ಕವಿದ ವಾತಾವರಣ ಇದ್ದರೆ, ಉಳಿದೆಡೆ ಥಂಡಿ ವಾತಾವರಣ (Karnataka weather Forecast) ಇರಲಿದೆ.

ಯಾವ್ಯಾವ ದಿನ ಎಲ್ಲೆಲ್ಲಿ ಮಳೆ ಸೂಚನೆ

ಜ.3 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ಮಲೆನಾಡಿನ ಹಾಸನ, ಕೊಡಗಿನಲ್ಲಿ ಮಳೆ ಸಾಧ್ಯತೆ ಇದೆ.

ಜ.4ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರಲ್ಲಿ ಅಲ್ಲಲ್ಲಿ ಮಳೆ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಮಳೆ ಮುಂದುವರಿಯಲಿದೆ.

ಜ.5ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಾತ್ರ ವರ್ಷಧಾರೆ ಇರಲಿದೆ. ಮಲೆನಾಡಿನ ಕೊಡಗು, ಹಾಸನ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು, ತುಮಕೂರಲ್ಲಿ ಮಳೆ ಸಾಧ್ಯತೆ ಇದೆ. ಉಳಿದಂತೆ ಜನವರಿ 6, 7 ಮತ್ತು 8, 9 ರವರೆಗೆ ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Road Accident : ರಸ್ತೆ ತಿರುವಿನಲ್ಲಿ ಅವಿತಿದ್ದ ಜವರಾಯ; ಟಿಪ್ಪರ್‌ ಚಕ್ರಕ್ಕೆ ಸಿಲುಕಿ ಸವಾರ ಮೃತ್ಯು

ಬೆಂಗಳೂರಿಗೆ ಇಲ್ಲ ಮಳೆ ತಂಟೆ

ಬೆಂಗಳೂರು ಹಾಗೂ ಸುತ್ತಮುತ್ತ ಪ್ರದೇಶಕ್ಕೆ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ಬೆಳಗ್ಗೆ ಹಾಗೂ ಸಂಜೆ ಸಮಯ ಥಂಡಿ ವಾತಾವರಣ ಇರಲಿದೆ. ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -17 ಡಿ.ಸೆ
ಮಂಗಳೂರು: 34 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 16 ಡಿ.ಸೆ
ಗದಗ: 32 ಡಿ.ಸೆ – 14 ಡಿ.ಸೆ
ಹೊನ್ನಾವರ: 36 ಡಿ.ಸೆ- 21 ಡಿ.ಸೆ
ಕಲಬುರಗಿ: 32 ಡಿ.ಸೆ – 18 ಡಿ.ಸೆ
ಬೆಳಗಾವಿ: 32 ಡಿ.ಸೆ – 15 ಡಿ.ಸೆ
ಕಾರವಾರ: 36 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version