ಬೆಂಗಳೂರು: ಶನಿವಾರದಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ (Rain News) ವರದಿ ಆಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ (Dry weather) ಇತ್ತು. ವಿಜಯಪುರದಲ್ಲಿ ಕಡಿಮೆ ಉಷ್ಣಾಂಶ 15.5 ಡಿ.ಸೆ ದಾಖಲಾಗಿದೆ. ಇನ್ನು ಭಾನುವಾರ (ಡಿ.17) ಬೆಂಗಳೂರು ಸೇರಿ ಹಲವೆಡೆ ಸೂರ್ಯ ಮರೆಯಾಗಿ ಮೋಡ ಕವಿದ ವಾತಾವರಣ (Karnataka weather Forecast) ಇತ್ತು.
ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಡಿ.18-19ರಂದು ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವೇ ಇರಲಿದೆ. ಪ್ರತ್ಯೇಕ ಸ್ಥಳದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 19 ಡಿ.ಸೆ ದಾಖಲಾಗಿದೆ.
ಇದನ್ನೂ ಓದಿ: KPSC exam : ಕೆಪಿಎಸ್ಸಿ ಪರೀಕ್ಷಾ ಕೇಂದ್ರಕ್ಕೆ ಮಕ್ಕಳೇ ಸೆಕ್ಯುರಿಟಿ ಆಫೀಸರ್ಸ್!
ಎಲ್ಲೆಲ್ಲಿ ಮಳೆ ಸೂಚನೆ
ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೋಲಾರ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸಲಿದೆ.
ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು ಮತ್ತು ಬಳ್ಳಾರಿಯಲ್ಲೂ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ.
ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಚದುರಿದಂತೆ ಮಳೆಯಾದರೆ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಧ್ಯಮ ಮಳೆಯಾಗಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ