Site icon Vistara News

Karnataka weather : ರಾಜ್ಯದಲ್ಲಿಂದು ಹೇಗಿರಲಿದೆ ಹವಾಮಾನ?

What will be the weather in the state today

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ ಇರಲಿದೆ. ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆ ಇದೆ.

ಹೀಗಾಗಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ತಾಪಮಾನ ಇಳಿಕೆ ಆಗಲಿದೆ. ಇದರಿಂದಾಗಿ ಚಳಿಯಾಗಲಿದೆ.

ಈ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಮೈಸೂರು, ರಾಮನಗರ, ಮಂಡ್ಯ, ತುಮಕೂರು, ವಿಜಯನಗರದಲ್ಲೂ ಶುಷ್ಕ ವಾತಾವರಣ ಇರಲಿದೆ.

ಕರಾವಳಿ‌ಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಅಲ್ಲಲ್ಲಿ ದಟ್ಟ ಮಂಜು ಇರಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Self Harming : ವಾಕಿಂಗ್‌ ಹೋಗುವೆ ಎಂದಳು; ಬ್ರಿಡ್ಜ್ ಮೇಲಿಂದ ಹಾರಿದಳು!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -16 ಡಿ.ಸೆ
ಮಂಗಳೂರು: 35 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 16 ಡಿ.ಸೆ
ಗದಗ: 31 ಡಿ.ಸೆ – 14 ಡಿ.ಸೆ
ಹೊನ್ನಾವರ: 36 ಡಿ.ಸೆ- 22 ಡಿ.ಸೆ
ಕಲಬುರಗಿ: 32 ಡಿ.ಸೆ – 18 ಡಿ.ಸೆ
ಬೆಳಗಾವಿ: 30 ಡಿ.ಸೆ – 14 ಡಿ.ಸೆ
ಕಾರವಾರ: 36 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version