Site icon Vistara News

Karnataka Weather : ಚಂಡಮಾರುತ ಎಫೆಕ್ಟ್‌; ರಾಜ್ಯದಲ್ಲಿ ಇನ್ನೂ ಮೂರು ದಿನ ವ್ಯಾಪಕ ಮಳೆ

Rain alert girl waiting

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಭಾರೀ ಮಳೆಯಾಗುವ (Heavy Rain warning) ಸಾಧ್ಯತೆ ಇದೆ. ಉತ್ತರ ಒಳನಾಡಲ್ಲಿ ಹಗುರವಾದ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗಿನಲ್ಲಿ ಲಘುವಾಗಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗದ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ದಾವಣಗೆರೆ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಲಘು ಮಳೆಯಾಗಬಹುದು.

ಉತ್ತರ ಒಳನಾಡಿನ ಬೆಳಗಾವಿ, ವಿಜಯನಗರ ಮತ್ತು ಹಾವೇರಿ ಜಿಲ್ಲೆಗಳ ಪ್ರತ್ಯೇಕ ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Navaratri: ಮೈಸೂರು ದಸರೆಯ ಹೆಜ್ಜೆ ಗುರುತುಗಳು

ಗರಿಷ್ಠ ಉಷ್ಣಾಂಶ ಏರಿಕೆ

ಬಾಗಲಕೋಟೆ, ಗದಗ, ಕೊಪ್ಪಳ, ಕಲಬುರಗಿ, ರಾಯಚೂರಿನ ಕೆಲವೆಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ತುಮಕೂರು ಜಿಲ್ಲೆಯಲ್ಲೂ ಒಂದೆರಡು ಕಡೆಗಳಲ್ಲಿ 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ – 21 ಡಿ.ಸೆ
ಮಂಗಳೂರು: 31 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 20 ಡಿ.ಸೆ
ಗದಗ: 33 ಡಿ.ಸೆ – 21 ಡಿ.ಸೆ
ಹೊನ್ನಾವರ: 33 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 31 ಡಿ.ಸೆ – 20 ಡಿ.ಸೆ
ಕಾರವಾರ: 34 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version