Site icon Vistara News

Karnataka Weather : ಇವತ್ತಿಗೆ ಅಂತ್ಯವಾಗುತ್ತಾ ಮಳೆ ಅಬ್ಬರ! 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Heavy Rain In karnataka

ಬೆಂಗಳೂರು: ತಮಿಳುನಾಡಿನ ಕನ್ಯಾಕುಮಾರಿಯ ಸಮುದ್ರ ಮಟ್ಟದಲ್ಲಿ ಸುಳಿಗಾಳಿ ಎದ್ದಿದ್ದು, ಜತೆಗೆ ಈಶಾನ್ಯದಲ್ಲಿ ತೇವಾಂಶ ಸಹಿತ ಭಾರಿ ಗಾಳಿ ಬೀಸುತ್ತಿದೆ. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಗುರುವಾರ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭರ್ಜರಿ ಮಳೆಯಾಗಲಿದೆ. ಕರ್ನಾಟಕ ಕರಾವಳಿಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾದರೆ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ವಿಜಯನಗರ ಮತ್ತು ಗದಗದಲ್ಲಿ ಗುಡುಗು ಸಹಿತ ಭಾರೀ ಮಳೆಯ ನಿರೀಕ್ಷೆ ಇದೆ. ಪ್ರತ್ಯೇಕವಾಗಿ ಬೆಳಗಾವಿ, ಧಾರವಾಡ, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಧ್ಯಮದಿಂದ ಭಾರಿ ಮಳೆ ಸಾಧ್ಯತೆ ಇದೆ. ಬೀದರ್‌ನಲ್ಲಿ ಸಾಧಾರಣ ಮಳೆ ಬೀಳಬಹುದು.

ಇದನ್ನೂ ಓದಿ: Bangalore Rain: ಸಹಕಾರನಗರದಲ್ಲಿ ಮಳೆ ಅವಾಂತರ, ನಿವಾಸಿಗಳಿಂದ ರಸ್ತೆ ತಡೆದು ಪ್ರತಿಭಟನೆ

ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ

ದಕ್ಷಿಣ ಒಳನಾಡಲ್ಲಿ ಚದುರಿದ ಸ್ಥಳಗಳಲ್ಲಿ ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಬೆಳಗ್ಗೆ ಸಮಯ ಮೋಡ ಕವಿದ ವಾತಾವರಣದೊಂದಿಗೆ ಜಿಟಿ ಜಿಟಿ ಮಳೆಯಾಗಲಿದೆ. ಆದರೆ ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಕೋಲಾರ, ರಾಮನಗರ ಮತ್ತು ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -20 ಡಿ.ಸೆ
ಮಂಗಳೂರು: 32 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 30ಡಿ.ಸೆ – 21 ಡಿ.ಸೆ
ಹೊನ್ನಾವರ: 32 ಡಿ.ಸೆ- 25 ಡಿ.ಸೆ
ಕಲಬುರಗಿ: 33 ಡಿ.ಸೆ – 23 ಡಿ.ಸೆ
ಬೆಳಗಾವಿ: 25ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version